ಮೇಕೆದಾಟು ಯೋಜನೆ: ಸುಪ್ರೀಂ ವಿಚಾರಣೆ 3 ವಾರಗಳ ಕಾಲ ಮುಂದೂಡಿಕೆ
ಕರ್ನಾಟಕದ ಮಹತ್ವದ ಕುಡಿಯುವ ನೀರು ಯೋಜನೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕುರಿತು ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೂರು ವಾರಗಳ ಕಾಲ ಮುಂದೂಡಿದೆ.

Published On :
ನವದೆಹಲಿ: ಕರ್ನಾಟಕದ ಮಹತ್ವದ ಕುಡಿಯುವ ನೀರು ಯೋಜನೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕುರಿತು ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೂರು ವಾರಗಳ ಕಾಲ ಮುಂದೂಡಿದೆ.
ಕರ್ನಾಟಕ-ತಮಿಳುನಾಡು ನಡುವೆ ಕಾನೂನು ಹೋರಾಟಕ್ಕೆ ಕಾರಣವಾಗಿರುವ ಈ ಯೋಜನೆಯುನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ವಿವರವನ್ನು ಕುರಿತು ಬುಧವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿ ಆದೇಶಿಸಿದೆ.
ಯೋಜನೆಗೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ನೀಡಿರುವ ವಿವರಗಳಿಗೆ ಕರ್ನಾಟಕದಿಂದ ಉತರವನ್ನು ನ್ಯಾಯಾಲಯ ಬಯಸಿದೆ. ಇದಕ್ಕೆ ಉತ್ತರ ನೀಡಲು ತನಗೆ ಕಾಲಾವಕಾಶ ಬೇಕು ಎಂದು ರಾಜ್ಯ ಸರ್ಕಾರ ಕೇಳಿದ ಹಿನ್ನೆಲೆಯಲ್ಲಿ ಕೋರ್ಟ್ ಮುಂದಿನ ವಿಚಾರಣೆಯನ್ನು ಮೂರು ವಾರಗಳ ಕಾಲ ಕಾಲಾವಕಾಶ ನೀಡಿದೆ.
ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. ಅಲ್ಲದೆ ಯೋಜನಾ ವಿವರ ಕುರಿತ ಸವಿವರ ವರದಿ (ಡಿಪಿಆರ್) ಸಲ್ಲಿಸುವಂತೆಯೂ ಸೂಚಿಸಿದೆ.
ತಮಿಳುನಾಡು ಸರ್ಕಾರ ಕರ್ನಾಟಕಕ್ದ ಈ ಯೋಜನೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದಾಗ ಅದರ ಅರ್ಜಿಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್ ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಕೆಗೆ ಸೂಚಿಸಿತ್ತು. ಇದರಂತೆ ತಮಿಳುನಾಡು ಈ ದಿನ ಅಫಿಡವಿಟ್ ಸಲ್ಲಿಕೆ ಮಾಡಿದೆ. ಇದೀಗ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಮೂರು ವಾರಗಳ ಕಾಲಾವಕಾಶ ನೀಡಿದ್ದು ಇನ್ನು ಮೂರು ವಾರಗಳ ಬಳಿಕ ವಿಚಾರಣೆ ಮತ್ತೆ ಮುಂದುವರಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtTamil NaduKarnatakaಕರ್ನಾಟಕಸುಪ್ರೀಂ ಕೋರ್ಟ್ತಮಿಳು ನಾಡುMekedatu dam projectಮೇಕೆದಾಟು ಅಣೆಕಟ್ಟು ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


