ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ
ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ...

Published On :
ಬೆಂಗಳೂರು: ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೇ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದು, ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಕ್ತಾಯಗೊಳ್ಳುವ ಮಾರ್ಚ್ 18ರ ವರೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


