ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿ ನಾಲ್ವರು ಜಿಲ್ಲಾಧಿಕಾರಿಗಳ ವರ್ಗಾವಣೆ!
ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ಕೊನೆಗೂ ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Published On :
ಹಾಸನ: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ಕೊನೆಗೂ ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಎ. ಮಂಜು ಒತ್ತಾಯದ ಮೇರೆಗೆ ಅವರನ್ನು ಅವಧಿಗೆ ಮುನ್ನ ಹಾಸನದಿಂದ ರೋಹಿಣಿ ಅವರನ್ನು ವರ್ಗಾವಣೆ ಮಾಡಿಸಲಾಗಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಿಂಧೂರಿ ಕೆಎಟಿ ಹಾಗೂ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ವೇಳೆ ರೇವಣ್ಣ ಸಿಂಧೂರಿ ಪರವಾಗಿ ನಿಂತಿದ್ದರು. ವರ್ಗಾವಣೆ ವಿರುದ್ಧ ತಡೆ ಆದೇಶ ನೀಡಲಾಗಿತ್ತು.
ಮೈತ್ರಿ ಸರ್ಕಾರ ರಚನೆ ಬಳಿಕ ತಾವು ಈ ಹಿಂದೆ ಬೆಂಬಲಿಸಿದ್ದ ಜಿಲ್ಲಾಧಿಕಾರಿಯೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದರು. ಅನೇಕ ಕಾರ್ಯಕ್ರಮಗಳಲ್ಲಿ ಇವರ ನಡುವಿನ ವಾಗ್ವಾದ ಕೂಡ ಬಹಿರಂಗಗೊಂಡಿತ್ತು.
ರೋಹಿಣಿ ಸಿಂಧೂರಿ ಸೇರಿದಂತೆ ಡಾ. ಎಂವಿ ವೆಂಕಟೇಶ್, ಕೃಷ್ಣ ಬಾಜಪೇಯಿ, ಅಕ್ರಂ ಪಾಷಾರನ್ನು ವರ್ಗಾವಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


