ಮಂಗಳೂರು - ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು: ಗೋಯಲ್
ಮಂಗಳೂರು-ಬೆಂಗಳೂರು - ಚೆನ್ನೈ ಹಾಗೂ ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುವುದು....

Published On :
ಬೆಂಗಳೂರು: ಮಂಗಳೂರು-ಬೆಂಗಳೂರು - ಚೆನ್ನೈ ಹಾಗೂ ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರು ಶುಕ್ರವಾರ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋಯಲ್ ಅವರು, ಮೇಕ್ ಇನ್ ಇಂಡಿಯಾ ಯೋಜನೆಯಡಿ ತಯಾರಿಸಲಾದ ದೇಶದ ಮೊದಲ ಸೆಮಿ ಹೈಸ್ಪೀಡ್ ರೈಲನ್ನು ಕರ್ನಾಟಕಕ್ಕೆ ಪರಿಚಯಿಸುವುದಾಗಿ ತಿಳಿಸಿದರು.
ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸಲು ವಂದೇ ಭಾರತ್ ರೈಲನ್ನು ಪರಿಚಯಿಸಲಾಗುತ್ತದೆ. ಮಂಗಳೂರು-ಚೆನ್ನೈ ಮತ್ತು ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸಲಿದೆ ಎಂದರು.
ಇನ್ನು ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಆಳವಡಿಕೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಆರು ತಿಂಗಳಿನಲ್ಲಿ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಆಳವಡಿಸಲಾಗುತ್ತದೆ ಎಂದು ಗೋಯೆಲ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Piyush Goyalಪಿಯೂಷ್ ಗೋಯಲ್Vande Bharat Expressವಂದೇ ಭಾರತ್ ಎಕ್ಸ್ ಪ್ರೆಸ್M\'luru-B\'luruಮಂಗಳೂರು - ಬೆಂಗಳೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


