ರಾಜ್ಯ

ಬಂಡೀಪುರ ನಂತರ ನಂದಿ ಬೆಟ್ಟದಲ್ಲೂ ಕಾಡ್ಗಿಚ್ಚು: ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳ ಹರಸಾಹಸ

ಬೆಂಗಳೂರಿನ ಹತ್ತಿರ ಇರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲೂ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.

ಬಂಡೀಪುರ ನಂತರ ನಂದಿ ಬೆಟ್ಟದಲ್ಲೂ ಕಾಡ್ಗಿಚ್ಚು: ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳ ಹರಸಾಹಸ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚುನಿಂದ ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಸುಟ್ಟು ಹೋಗಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದ್ದು, ನೂರಾರು ವನ್ಯಜೀವಿಗಳು ಸಾವಿಗೀಡಾಗಿವೆ.

ಇದರಬೆನ್ನಲ್ಲೇ ಈಗ ಬೆಂಗಳೂರಿನ ಹತ್ತಿರ ಇರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲೂ ಬೃಹತ್ ಪ್ರಮಾಣದ  ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.

ನಂದಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪ್ತಿಸಿದ್ದು, ತೀವ್ರ ನಷ್ಟವಾಗಿದೆ. ಭದ್ರತಾ ಸಿಬ್ಬಂದಿಗಳು ಹಾಗೂ ಅರಣ್ಯಾಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಬೆಂಕಿಗೆ ಕಾರಣವಾದರೂ ಏನು ಹಾಗೂ ಎಷ್ಟು ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಏರೋ ಇಂಡಿಯಾ 2019 ಬೆಂಕಿ ಅವಘಡ ಸಂಭವಿಸಿದ ಎರಡು ದಿನಗಳ ನಂತರ ಬೆಂಗಳೂರು ಹತ್ತಿರದಲ್ಲಿ ಮತ್ತೊಂದು ಬೆಂಕಿ ಅವಘಡ ಉಂಟಾಗಿದ್ದು, ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.