ಬಿಸಿಲ ಬೇಗೆಯಲ್ಲಿ ಬೆಂದು ಹೋಗಿರುವ ಬೆಂಗಳೂರಿಗರು; ತಾಪಮಾನ ಹಠಾತ್ ಏರಿಕೆ
ಮಾರ್ಚ್ ತಿಂಗಳು ಹತ್ತಿರ ಬರುತ್ತಿದ್ದಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ತಾಪ...

Published On :
ಬೆಂಗಳೂರು: ಮಾರ್ಚ್ ತಿಂಗಳು ಹತ್ತಿರ ಬರುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದೆ. 2005ರಲ್ಲಿ ಬೆಂಗಳೂರಿನಲ್ಲಿ ದಾಖಲಾದ 35.9 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ನಿನ್ನೆ ಬೆಂಗಳೂರಿನಲ್ಲಿ ಮತ್ತೆ ಪುನರಾವರ್ತನೆಯಾಗಿದೆ.
ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಬಿಸಿಲು ಮತ್ತು ತಾಪಮಾನ ವಿಪರೀತವಾಗಿದೆ. ಭಾರತದ ಹವಾಮಾನ ಇಲಾಖೆಯ ವರದಿ ಪ್ರಕಾರ, ಈ ವರ್ಷ ಫೆಬ್ರವರಿ ತಿಂಗಳಲ್ಲಿ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕವಾಗಿದೆ.
ವೇಗವಾಗಿ ಬೆಳೆಯುತ್ತಿರುವ ನಗರೀಕರಣ ವಾತಾವರಣದಲ್ಲಿ ತಾಪಮಾನ ಹೆಚ್ಚಾಗಲು ಕಾರಣ ಎಂದು ಬೆಂಗಳೂರು ಹವಾಮಾನ ಇಲಾಖೆಯ ಪ್ರಭಾರಿ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ಹೇಳುತ್ತಾರೆ.
ರಾಜ್ಯ ಹವಾಮಾನ ಇಲಾಖೆಯ ಪ್ರಭಾರ ನಿರ್ದೇಶಕ ಸಿಎಸ್ ಪಾಟೀಲ್, ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿರುವುದರಿಂದ ತಾಪಮಾನ ಹೆಚ್ಚಾಗಿದೆ ಎಂದು ಕಾರಣ ನೀಡುತ್ತಾರೆ.ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ತಾಪಮಾನ ಇಷ್ಟೊಂದು ಕಂಡುಬರುತ್ತಿದೆ.
ನಿನ್ನೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ಉತ್ತರ ಕರ್ನಾಟಕದ ಒಳನಾಡಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ 3.1ಡಿಗ್ರಿಯಿಂದ 5 ಡಿಗ್ರಿಯಷ್ಟು ಕಡಿಮೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


