ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!
ವರದಕ್ಷಿಣೆ ಕಿರುಕುಳಕ್ಕೆ ಭೇಸತ್ತ ಮಹಿಳೆಯೊಬ್ಬರು ಮೈಮೇಲೆ ಸೀಮೀಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಲುವ ಮೂಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Published On :
ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಭೇಸತ್ತ ಮಹಿಳೆಯೊಬ್ಬರು ಮೈಮೇಲೆ ಸೀಮೀಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಲುವ ಮೂಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕು ಉದ್ದೂರು ನಿವಾಸಿ ಭಾಗ್ಯ(26) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸಮಯದಲ್ಲೇ ಆಕೆಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಳಾಗಿತ್ತು. ಆದರೆ ಅತಿಯಾದ ಸುಟ್ಟಗಾಯಗಳಾಗಿದ್ದ ಭಾಗ್ಯ ಅವರಿಗೆ ಚಿಕಿತ್ಸೆ ಫಲಕಾರಿಯಾಗಿಲ್ಲದೆ ಅವರು ಸಾವನ್ನಪ್ಪಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಉದ್ದೂರಿನ ಸುರೇಶ್ ಎಂಬಾತನೊಡನೆ ವಿವಾಹವಾಗಿದ್ದ ಭಾಗ್ಯ ಮೈಸೂರಿನ ಶಾರದಾದೇವಿ ನಗರದ ನಿವಾಸಿಯಾಗಿದ್ದರು.ವೀರಪ್ಪ, ಮಂಜುಳ ಅವ್ರ ಪುತ್ರಿಯಾಗಿದ್ದ ಭಾಗ್ಯಪತಿ ಹಾಗೂ ಅವರ ಮನೆಯವರು ನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಭಾಗ್ಯ ಅವರಿಗೆ ಎರಡೂವರೆ ವರ್ಷದ ಹೆಣ್ಣು, ಒಂದೂವರೆ ವರ್ಷದ ಗಂಡು ಮಗುವನ್ನು ಅಗಲಿದ್ದಾರೆ.
ಘಟನೆ ಸಂಬಂಧ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


