ಪಾಕಿಸ್ತಾನದಲ್ಲಿ ಭಾರತೀಯ ವಾಯುಸೇನೆ ದಾಳಿ; ರಾಜ್ಯದಲ್ಲಿ ಹೈ ಅಲರ್ಟ್
ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣ ಮತ್ತು ಶಿಬಿರಗಳ ಮೇಲೆ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ...

Published On :
ಬೆಂಗಳೂರು: ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣ ಮತ್ತು ಶಿಬಿರಗಳ ಮೇಲೆ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ವಾಯುದಾಳಿ ನಡೆಸಿರುವುದರಿಂದ ಭಾರತ ಪಾಕ್ ನಡುವಿನ ಸಂಬಂಧ ಬಿಗಡಾಯಿಸಿದ್ದು ಈ ಹಿನ್ನಲೆಯಲ್ಲಿ ದೇಶಾದ್ಯಂತ ಸಾರ್ವಜನಿಕ ಸ್ಥಳಗಳು, ಜನ ನಿಬಿಡ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕದ ವಿವಿಧ ರಕ್ಷಣಾ ಕೇಂದ್ರಗಳು ಮತ್ತು ತರಬೇತಿ ಶಿಬಿರಗಳಲ್ಲಿ ತೀವ್ರ ಎಚ್ಚರಿಕೆ ಮತ್ತು ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ನಗರದ ರೈಲು, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ವಿಮಾನ ನಿಲ್ದಾಣ, ರೈಲು ನಿಲ್ದಾಣ ಇತ್ಯಾದಿ ಕಡೆಗಳಲ್ಲಿ ಜನರ ತಪಾಸಣೆ, ವಸ್ತುಗಳ ತಪಾಸಣೆ ತೀವ್ರವಾಗಿ ನಡೆಯುತ್ತಿದೆ. ಭದ್ರತೆಯ ಭಾಗವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನ ಉನ್ನತ ಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪೊಲೀಸ್ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ಮತ್ತು ತಪಾಸಣೆಗೆ ನಿಯೋಜಿಸಲಾಗಿದೆ.
ಜೈಶ್ ಎ ಮೊಹಮ್ಮದ್ ಸಂಘಟನೆಯ ತಾಣಗಳ ಮೇಲೆ ಭಾರತೀಯ ವಾಯುಪಡೆಯ ದಾಳಿಯ ನಂತರ ಕಾರವಾರದಲ್ಲಿರುವ ನೌಕಾಪಡೆ ದುರಸ್ತಿ ಕೇಂದ್ರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.
ಈ ಮಧ್ಯೆ ರಜೆಯ ಮೇಲೆ ತಮ್ಮ ಊರುಗಳಿಗೆ ತೆರಳಿರುವ ಸೇನಾಪಡೆ ಯೋಧರಿಗೆ ಮತ್ತು ಇತರ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಇಡೀ ಪೊಲೀಸ್ ಪಡೆಗೆ ರಾಜ್ಯಾದ್ಯಂತ ಎಚ್ಚರವಾಗಿರುವಂತೆ ಸೂಚಿಸಲಾಗಿದೆ. ಆದರೆ ರಾಜ್ಯದ ಯಾವುದೇ ನಿರ್ದಿಷ್ಟ ಕೇಂದ್ರಗಳು ಮತ್ತು ಸ್ಥಳಗಳಿಗೆ ಎಚ್ಚರಿಕೆ ಕಳುಹಿಸಿಲ್ಲ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕಮಲ್ ಪಂತ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಭದ್ರತೆKempegowda International Airportಭಾರತೀಯ ವಾಯುಸೇನೆAlertIAF strikes in Pakistan
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


