ರಾಜ್ಯ

ಕೊಪ್ಪಳ: ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ

ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲ್ಲೂಕಿನ ಮೆಟಗಲ ...

ಕೊಪ್ಪಳ: ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ: ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲ್ಲೂಕಿನ ಮೆಟಗಲ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಶೇಖರಯ್ಯ ಬಿದನಲ್, ಅವರ ಪತ್ನಿ ಮತ್ತು ನಾಲ್ವರು ಪುತ್ರಿಯರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹಗಳು ಸಿಕ್ಕಿವೆ ಎಂದು ಕೊಪ್ಪಳದ ಪೊಲೀಸ್ ಸೂಪರಿಂಟೆಂಡೆಂಟ್ ರೇಣುಕ ಕೆ ಸುಕುಮಾರ ತಿಳಿಸಿದ್ದಾರೆ.

ಮೃತರನ್ನು 42 ವರ್ಷದ ಶೇಖರಯ್ಯ, ಅವರ ಪತ್ನಿ 37 ವರ್ಷದ ಜಯಮ್ಮ, ಮಕ್ಕಳಾದ ಬಾಸಮ್ಮ, ಗೌರಮ್ಮ, ಸಾವಿತ್ರಿ, ಪಾರ್ವತಿ ಎಂದು ಗುರುತಿಸಲಾಗಿದೆ.

ಪತ್ನಿ ಮತ್ತು ಪುತ್ರಿಯರಿಗೆ ವಿಷವುಣ್ಣಿಸಿ ಶೇಖರಯ್ಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ತಕ್ಷಣಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಬೆಳೆಸಾಲವನ್ನು ಹಿಂತಿರುಗಿಸಲು ಸಾಧ್ಯವಾಗದೆ ಕುಟುಂಬದವರು ಈ ಕಠಿಣ ಕ್ರಮ ಕೈಗೊಂಡಿರಬಹುದು ಎಂದು ನೆರೆಹೊರೆಯವರು ಹೇಳುತ್ತಾರೆ.

ಕೊಪ್ಪಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.