ಕಲಬುರ್ಗಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಶನಿವಾರ ನಿರ್ಧರಿಸಲಾಗಿದೆ.

Published On :
ಧಾರವಾಡ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಶನಿವಾರ ನಿರ್ಧರಿಸಲಾಗಿದೆ.
ಈ ಸಂಬಂಧ ಇಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಬಳಿಗಾರ್ ಅವರು, ಕಲಬುರ್ಗಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸುವ ಪ್ರಸ್ತಾವಕ್ಕೆ ಸರ್ವಾನುಮತದ ಅನುಮೋದನೆ ನೀಡಲಾಯಿತು ಎಂದರು.
1987ರ ನಂತರ ಕಲಬುರ್ಗಿಗೆ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 31 ವರ್ಷಗಳ ನಂತರ ಅಕ್ಷರ ಜಾತ್ರೆಗೆ ಶರಣರ ನಾಡು ಸಜ್ಜಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


