ಕೈಕಾಲು ಕತ್ತರಿಸುತ್ತೇನೆ: ಅರಣ್ಯಾಧಿಕಾರಿಗೆ ಕಾಂಗ್ರೆಸ್ ಶಾಸಕ ಬೆದರಿಕೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕಾರಣ ದೇವಸ್ಥಾನ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರಣ್ಯಾಧಿಕಾರಿಯೊಬ್ಬರಿಗೆ ಕಾಂಗ್ರೆಸ್ ಶಾಸಕರೊಬ್ಬರು ಕೈಕಾಲು ಕತ್ತರಿಸುವುದಾಗಿ ಬೆದರಿಕೆ ಹಾಕಿರುವ ವಿಡಿಯೋವೊಂದು...

Published On :
ಭದ್ರಾವತಿ: ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕಾರಣ ದೇವಸ್ಥಾನ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರಣ್ಯಾಧಿಕಾರಿಯೊಬ್ಬರಿಗೆ ಕಾಂಗ್ರೆಸ್ ಶಾಸಕರೊಬ್ಬರು ಕೈಕಾಲು ಕತ್ತರಿಸುವುದಾಗಿ ಬೆದರಿಕೆ ಹಾಕಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿದೆ ಎನ್ನಲಾದ ದೇವಸ್ಥಾನಕ್ಕೆ ಅಧಿಕಾರಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿದ್ದಾರೆ. ಇದರಂತೆ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ವರದಿಗಳು ತಿಳಿಸಿವೆ.
ದೇವಸ್ಥಾನ ನಿರ್ಮಾಣಕ್ಕೆ ವಿರೋಧಿಸಿದರೆ, ಅರಣ್ಯಾಧಿಕಾರಿ ದಿನೇಶ್ ಅವರ ಕೈಕಾಲು ಕತ್ತರಿಸುತ್ತೇನೆಂದು ಫೋನ್ ನಲ್ಲಿ ಶಾಸಕ ಅವಾಜ್ ಹಾಕಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಗ್ರಾಮಸ್ಥರ ಎದುರೇ ಅಧಿಕಾರಿಗೆ ಶಾಸಕ ಅವಾಜ್ ಹಾಕಿರುವ ವಿಡಿಯೋ ಬಗ್ಗೆ ಇದೀಗ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಆದರೆ, ಈ ಬಗ್ಗೆ ಅರಣ್ಯಾಧಿಕಾರಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


