ಬರ ಪರಿಹಾರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ
ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ...

ಸಿಂಧನೂರು(ರಾಯಚೂರು): ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಇದುವರೆಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿಂಧನೂರಿನಲ್ಲಿ ನಿನ್ನೆ ರಾಜ್ಯಮಟ್ಟದ ಪಶು ಮತ್ಸ್ಯ ಮೇಳ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ತುಂಗಾಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿಕೊಂಡಿದ್ದು, ನೀರಿನ ಸಂಗ್ರಹಣೆ ಕಡಿಮೆಯಾಗಿದೆ ಮತ್ತು ಭರ್ತಿಯಾಗುತ್ತಲೇ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿರುವುದು ಗಮನಕ್ಕೆ ಬಂದಿದ್ದು, ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಶಾಶ್ವತವಾಗಿ ನಮ್ಮಜನರಿಗೆ ನಿಗದಿಪಡಿಸಿದ ಪ್ರಮಾಣದ ನೀರಿನ ಸೌಕರ್ಯ ಕಲ್ಪಿಸಲು ಸ್ವಲ್ಪ ಸಮಯವಕಾಶ ಅಗತ್ಯವಿದ್ದು, ನಮ್ಮ ಸರ್ಕಾರದಿಂದ ತುಂಗಾಭದ್ರಾ ಜಲಾಶಯದ ವಿಷಯದಲ್ಲಿ ಶಾಶ್ವತ ಸೌಲಭ್ಯ ಒದಗಿಸಿಕೊಡಲಾಗುವುದು ಎಂದರು.
ದೇಶದಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಕೆಯಾಗುವ ನಿಟ್ಟಿನಲ್ಲಿ ಅಂತರ್ ರಾಜ್ಯ ನದಿ ಜೋಡಣೆ ಸೇರಿದಂತೆ ವಿವಿಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ತೈಲ ಬೆಲೆ ಏರಿಕೆ ಮತ್ತು ಸುಂಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಅವರು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬೆಲೆಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ ಎಂದು ಸಮರ್ಥಿಸಿಕೊಂಡರು.
ಸಾರಿಗೆ ನಿಗಮಗಳು ಸಂಕಷ್ಟದಲ್ಲಿರುವ ಕಾರಣ ನಿಗಮಗಳು 6 ತಿಂಗಳುಗಳ ಹಿಂದೆ ಬೆಲೆ ಏರಿಕೆ ಕುರಿತು ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದಿಸಬೇಕಾಗಿದೆ ಎಂದರು. ಹೆಲಿಪ್ಯಾಡ್ ನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಗೌರವ ವಂದನೆ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


