ಭಾರತ್ ಬಂದ್: ರಜೆ ಘೋಷಣೆ ತೀರ್ಮಾನ ಆಯಾ ಶಾಲಾ-ಕಾಲೇಜುಗಳಿಗೆ ಬಿಟ್ಟದ್ದು
ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು...

ಬೆಂಗಳೂರು: ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.
ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


