ಸಿಬಿಐ ನಿರ್ದೇಶರನ್ನಾಗಿ ವರ್ಮಾ ಮುಂದುವರಿಕೆ, ಮೋದಿ ಸರ್ಕಾರಕ್ಕೆ 'ಸುಪ್ರೀಂ' ಕಪಾಳಮೋಕ್ಷ: ಗುಂಡೂರಾವ್
ಅಲೋಕ್ ವರ್ಮಾರನ್ನೇ ಸಿಬಿಐ ನಿರ್ದೇಶರನ್ನಾಗಿ ಮುಂದುವರೆಸುವ ಮೂಲಕ ಸುಪ್ರೀಂಕೋರ್ಟ್ ಮೋದಿ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

Published On :
ಬೆಂಗಳೂರು: ಅಲೋಕ್ ವರ್ಮಾರನ್ನೇ ಸಿಬಿಐ ನಿರ್ದೇಶರನ್ನಾಗಿ ಮುಂದುವರೆಸುವ ಮೂಲಕ ಸುಪ್ರೀಂಕೋರ್ಟ್ ಮೋದಿ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಿಬಿಐ ನಿರ್ದೇಶಕರನ್ನಾಗಿ ಅಲೋಕ್ ವರ್ಮಾ ಅವರನ್ನೇ ಮುಂದುವರೆಸಲು ನಿರ್ಧಾರ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ನರೇಂದ್ರ ಮೋದಿ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ. ಈ ಪ್ರಕರಣ ಕೇಂದ್ರ ಸರ್ಕಾರ ಆಡಳಿತದ ವೈಫಲ್ಯವನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದಾರೆ.
ತಮ್ಮ ಅಧಿಕಾರಕ್ಕೆ ಕತ್ತರಿ ಹಾಕಿ ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಕಡ್ಡಾಯ ರಜೆ ಮೇಲೆ ಅಲೋಕ್ ವರ್ಮಾವನ್ನು ಕಳುಹಿಸಿರುವ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್CBIಸಿಬಿಐDinesh Gundu Raoದಿನೇಶ್ ಗುಂಡೂರಾವ್Modi governmentಮೋದಿ ಸರ್ಕಾರAlok Vermaಅಲೋಕ್ ವರ್ಮಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


