ರಾಜ್ಯ

ಭಾರತ ಬಂದ್: ಮುಂದಿನ ಎರಡು ಶನಿವಾರ ಬೆಂಗಳೂರಿನ ಖಾಸಗಿ ಶಾಲೆಗಳು ಫುಲ್ ಡೇ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ...

ಭಾರತ ಬಂದ್: ಮುಂದಿನ ಎರಡು ಶನಿವಾರ ಬೆಂಗಳೂರಿನ ಖಾಸಗಿ ಶಾಲೆಗಳು ಫುಲ್ ಡೇ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆನೀಡಿರುವ ಭಾರತ ಬಂದ್ ಬುಧವಾರ ಕೂಡ ಮುಂದುವರಿದಿದ್ದರೂ ನಗರದ ಬಹುತೇಕ ಶಾಲಾ ಕಾಲೇಜುಗಳು ಇಂದು ಎಂದಿನಂತೆ ತೆರೆದಿವೆ.

ಇಂದು ಶಾಲಾ ಕಾಲೇಜುಗಳಿಗೆ ಅಧಿಕೃತ ಸರ್ಕಾರಿ ರಜೆ ಘೋಷಿಸಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ ಎಂ ವಿಜಯ್ ಶಂಕರ್ ತಿಳಿಸಿದ್ದಾರೆ.ಆದರೆ ಕೆಲವು ಖಾಸಗಿ ಶಾಲೆಗಳು ನಿನ್ನೆ ಮತ್ತು ಇಂದು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಿವೆ.

ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ದಾವಣಗೆರೆ ಮತ್ತು ತುಮಕೂರು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಮುಂದಿನ ಪರೀಕ್ಷಾ ದಿನಾಂಕಕ್ಕೆ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ವೀಕ್ಷಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.