ಅಮಾನವೀಯ ಘಟನೆ: ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ವಿಷ ಕೊಟ್ಟು ಕೊಂದ ಪಾಪಿ ತಂದೆ!
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ಚಿಕಿತ್ಸೆ ಕೊಡಿಸುವುದನ್ನು ಬಿಟ್ಟು ಆಕೆಗೆ ವಿಷ ಕೊಟ್ಟು ತಂದೆಯೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹೆಮ್ಮಾಡಿಯ ಕುಂಬ್ರಿ ಮಜರೆಯಲ್ಲಿ ನಡೆದಿದೆ...

Published On :
ಶಿರಸಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ಚಿಕಿತ್ಸೆ ಕೊಡಿಸುವುದನ್ನು ಬಿಟ್ಟು ಆಕೆಗೆ ವಿಷ ಕೊಟ್ಟು ತಂದೆಯೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹೆಮ್ಮಾಡಿಯ ಕುಂಬ್ರಿ ಮಜರೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 9 ವರ್ಷದ ನಯನಾ ನಾಗರಾಜ ಪೂಜಾರಿ ಎಂದು ಗುರುತಿಸಲಾಗಿದೆ. ತಂದೆ ನಾಗರಾಜ್ ಪೂಜಾರಿ ಮಗಳಿಗೆ ವಿಷ ನೀಡಿ ಅಥವಾ ಹಲ್ಲೆ ಮಾಡಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪತ್ನಿ ಮನೆಯಲ್ಲಿ ಇಲ್ಲದಾಗ ನಾಗರಾಜ ಪೂಜಾರಿ ಈ ಕೃತ್ಯ ಎಸಗಿದ್ದು ಸಂಬಂಧಿಕರು ಬಂದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


