ರಾಜ್ಯ

ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿ ಮೂವರ ಹತ್ಯೆಗೆ ಸಂಚು: ಗುಪ್ತಚರ ಇಲಾಖೆ

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿದಂತೆ ಮೂವರು ಹಿಂದೂ ಪರ ಸಂಘಟನೆಗಳ ಮುಖಂಡರ...

ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿ ಮೂವರ ಹತ್ಯೆಗೆ ಸಂಚು: ಗುಪ್ತಚರ ಇಲಾಖೆ
ಪ್ರಭಾಕರ್ ಭಟ್
Published On :
ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿದಂತೆ ಮೂವರು ಹಿಂದೂ ಪರ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಪೊಲೀಸರು, ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭದ್ರತೆ ನೀಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಎದುರಿಸುತ್ತಿರುವ ವಿಶ್ವಹಿಂದೂ ಪರಿಷತ್ ಮುಖಂಡರಾದ ಜಗದೀಶ್ ಶೇಣವರಿ ಮತ್ತು ಭಜರಂಗದಳದ ಶರಣ್‌ ಪಂಪ್‌ವೆಲ್‌ ಅವರಿಗೆ ಎಚ್ಚರದಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.
ಇಂದು ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ತೆರಳಬೇಕಾಗಿದ್ದ ಪ್ರಭಾಕರ್‌ ಭಟ್‌ ಅವರು ಸುರಕ್ಷತೆಯ ದೃಷ್ಟಿಯಿಂದ ವಿಮಾನ ಮೂಲಕ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿದೆ. 
ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಗುಪ್ತಚರ ಇಲಾಖೆ ಬಂಧಿಸಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.