ಈ ವರ್ಷ ಆನ್ ಲೈನ್ ನಲ್ಲಿ ಸಿಇಟಿ ಇಲ್ಲ: ಪರೀಕ್ಷಾ ಪ್ರಾಧಿಕಾರ
ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಆನ್ ಲೈನ್ ನಲ್ಲಿ ಇರುವುದಿಲ್ಲ. ಆನ್ ಲೈನ್ ನಲ್ಲಿ ...

ಬೆಂಗಳೂರು: ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಆನ್ ಲೈನ್ ನಲ್ಲಿ ಇರುವುದಿಲ್ಲ. ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಈ ವರ್ಷ ಸಂಪೂರ್ಣ ಸಜ್ಜಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಸಿಇಟಿ 2019ರ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಲಾಗುವುದು ಎಂದು ಮೊನ್ನೆ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಹೇಳಿದ್ದರು. ಆದರೂ ಆನ್ ಲೈನ್ ನಲ್ಲಿ ಪರೀಕ್ಷೆ ಮಾಡಲು ಸಮಯಾವಕಾಶ ಬೇಕಾಗಿದೆ ಎಂದು ಹೇಳಿದ್ದರು. ಜನವರಿ 19ರಂದು ಭೇಟಿಯಾಗಿ ಸಭೆ ನಡೆಸಲಿದ್ದು ಅಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಪ್ರಕ್ರಿಯೆಗಳು ನಡೆಯುತ್ತಿದ್ದು ಇದಕ್ಕೆ ಸಾಫ್ಟ್ ವೇರ್ ನ್ನು ಸಿದ್ದಪಡಿಸುತ್ತಿದ್ದರೂ ಕೂಡ ಹಲವು ಬಾರಿ ಪ್ರಾಯೋಗಿಕ ಅಣಕು ಪರೀಕ್ಷೆ ನಡೆಸಿದ ನಂತರವಷ್ಟೇ ಪರೀಕ್ಷೆ ನಡೆಸಲು ಸಾಧ್ಯ. ಒಂದೇ ಸಲಕ್ಕೆ ವಿದ್ಯಾರ್ಥಿಗಳ ಮೇಲೆ ಹೇರಲು ಸಾಧ್ಯವಿಲ್ಲ ಏಕೆಂದರೆ ಬಹುತೇಕ ಮಂದಿ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದಾರೆ. 2020ರ ಸಿಇಟಿಯಿಂದ ನಡೆಸಬಹುದಾಗಿದೆ ಎಂದು ಕೆಇಎಯ ಅಧಿಕಾರಿಯೊಬ್ಬರು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


