ಮೋದಿ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ಅಸ್ತ್ರವನ್ನು ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

ಹಾಸನ: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ಅಸ್ತ್ರವನ್ನು ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮನೋಭಾವದಿಂದ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10 ರಷ್ಟು ಮೀಸಲಾತಿಗೆ ಕೇಂದ್ರಸರ್ಕಾರ ನಿರ್ಧರಿಸಿದೆ. ಇದಕ್ಕೆ ಎಲ್ಲಾ ಪಕ್ಷದವರು ಬೆಂಬಲ ನೀಡಿದ್ದಾರೆ. ಇದು ಸುಪ್ರೀಂಕೋರ್ಟ್ ಗೂ ಹೋಗಿದೆ ಅಲ್ಲಿ ಏನಾಗುತ್ತೋ ಎಂಬುದನ್ನು ನೋಡೋಣ ಎಂದರು.
ಜೆಡಿಎಸ್ ಪಕ್ಷ ಬ್ರಾಹ್ಮಣ ಸಮುದಾಯಕ್ಕೆ ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಈ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಯಾವ ಪ್ರಧಾನಿ ಅಥವಾ ಸಿಎಂ ಕೂಡಾ ಬಗೆಹರಿಸಲು ಸಾಧ್ಯವಿಲ್ಲ ಎಂದು ದೇವೇಗೌಡ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


