ನಗದು ವಶ ಕೇಸಿನ ವರದಿ ಮಾಡದಂತೆ ಮಾಧ್ಯಮಗಳಿಗೆ ತಡೆ ಹಾಕಿ: ಸಚಿವ ಪುಟ್ಟರಂಗ ಶೆಟ್ಟಿ ಕೋರ್ಟ್ ಮೊರೆ
ತಮ್ಮ ಸಹಾಯಕನ ಬಳಿ ಸಿಕ್ಕಿದ ದಾಖಲೆಗಳಿಲ್ಲದೆ ಹಣದ ಬಗ್ಗೆ ಮಾಧ್ಯಮಗಳು ವರದಿ ಮಾಡುವುದಕ್ಕೆ ....

ಬೆಂಗಳೂರು: ತಮ್ಮ ಸಹಾಯಕನ ಬಳಿ ಸಿಕ್ಕಿದ ದಾಖಲೆಗಳಿಲ್ಲದೆ ಹಣದ ಬಗ್ಗೆ ಮಾಧ್ಯಮಗಳು ವರದಿ ಮಾಡುವುದಕ್ಕೆ ತಡೆ ನೀಡಬೇಕೆಂದು ಕೋರಿ ಹಿಂದುಳಿದ ಕಲ್ಯಾಣ ಇಲಾಖೆ ಸಚಿವ ಸಿ ಪುಟ್ಟರಂಗ ಶೆಟ್ಟಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜನವರಿ 4ರಂದು ಟೈಪಿಸ್ಟ್ ಮೋಹನ್ ಬಳಿಯಿಂದ ವಿಧಾನಸೌಧ ಆವರಣದಲ್ಲಿ ಪೊಲೀಸರು 25 ಲಕ್ಷದ 76 ಸಾವಿರ ರೂಪಾಯಿ ವಶಪಡಿಸಿಕೊಂಡಿದ್ದರು.
ಸಚಿವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬರುವ ಸೋಮವಾರಕ್ಕೆ ಮುಂದೂಡಿದೆ. ಮಾಧ್ಯಮಗಳು ನಗದು ಪತ್ತೆ ವಿಷಯಕ್ಕೆ ಸಂಬಂಧಪಟ್ಟಂತೆ ಸಿಟಿ ಸಿವಿಲ್ ಕೋರ್ಟಿನಲ್ಲಿ ಪುಟ್ಟರಂಗ ಶೆಟ್ಟಿ ಮೊರೆ ಹೋಗಿದ್ದರು. ಆದರೆ ಸಿಟಿ ಸಿವಿಲ್ ನ್ಯಾಯಾಲಯ ಮಾಧ್ಯಮಗಳಿಗೆ ನೊಟೀಸ್ ಮಾತ್ರ ಜಾರಿ ಮಾಡಿತ್ತು. ಹೀಗಾಗಿ ಸಚಿವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


