ತೀವ್ರ ಕುತೂಹಲ ಮೂಡಿಸಿದೆ ಮಾಜಿ ಸಚಿವ ಜನಾರ್ದನ ರೆಡ್ಡಿ ಫೇಸ್ ಬುಕ್ ಪೋಸ್ಟ್!
52ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ರಾಜಕೀಯ ನಾಯಕರು ಸೇರಿದಂತೆ ಅಭಿಮಾನಿಗಳು ಹಾಗೂ ಹಿತೈಷಿಗಳು ಶುಭಕೋರಿದ್ದಾರೆ...

Published On :
ಬೆಂಗಳೂರು: 52ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ರಾಜಕೀಯ ನಾಯಕರು ಸೇರದಂತೆ ಅಭಿಮಾನಿಗಳು ಹಾಗೂ ಹಿತೈಷಿಗಳು ಶುಭಕೋರಿದ್ದಾರೆ.
ಈ ಮಧ್ಯೆ ರೆಡ್ಡಿ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ವಿಷಯ ಮತ್ತೆ ರಾಜಕೀಯಕ್ಕೆ ಮರಳುವ ಸೂಚನೆಯನ್ನು ನೀಡಿದೆ.
2019ರ ಹೊಸ ವರ್ಷದಲ್ಲಿ ನನ್ನ ಬದುಕಿನ ಪುಟದಲ್ಲಿ ಹೊಸ ಅಧ್ಯಾಯ ಬರೆಯಬೇಕೆಂದು ಬಯಸಿದ್ದೇನೆ ಎಂಬ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಫೇಸ್ಬುಕ್ ಫೋಸ್ಟ್ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
2004, ಡಿಸೆಂಬರ್ 31 ರಂದು ನನ್ನ ತಾಯಿಯವರು ಸ್ವರ್ಗಸ್ಥರಾದ ವರ್ಷದಿಂದ ನಾನು ಬಹಿರಂಗವಾಗಿ ಜನ್ಮದಿನ ಆಚರಿಸಿಕೊಳ್ಳದೆ ಕೇವಲ ದೇವರ ಪೂಜೆ, ಧ್ಯಾನ ಹಾಗೂ ಸಮಾಜದ ಸಮಸ್ತ ಜನರ ಹಿತಕ್ಕಾಗಿ ಭಗವಂತನಲ್ಲಿ ಪ್ರಾರ್ಥನೆ ಮಾಡುವ ಮೂಲಕ ಅತ್ಯಂತ ಸರಳವಾಗಿ ಆಚರಿಸಿಕೊಳ್ಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


