ರಾಜ್ಯ

ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆಯಾಗದ ಆರೋಗ್ಯ: ಸಿದ್ದಗಂಗಾ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ

ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಆಗಾಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ...

ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆಯಾಗದ ಆರೋಗ್ಯ: ಸಿದ್ದಗಂಗಾ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ
ಸಿದ್ದಗಂಗಾ ಶ್ರೀ
Published On :
ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಆಗಾಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ.
ಶ್ರೀಗಳ ಶ್ವಾಸಕೋಶದ ಎರಡೂ ಭಾಗದಲ್ಲೂ ನೀರು ತುಂಬಿಕೊಂಡಿದ್ದು ಹೊರತೆಗೆಯಲಾಗಿದೆ. ಸದ್ಯ ದ್ರವ ಆಹಾರ ಮುಂದುವರಿಸಲಾಗಿದೆ  ನಿರೀಕ್ಷಿತ ಮಟ್ಟದಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್‌ ಹೇಳಿದ್ದಾರೆ.
ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಮಲಗಿದ್ದಲ್ಲಿಯೇ ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಕೈಕಾಲುಗಳಲ್ಲಿ ಚಲನವಲನ ಇದೆ. ಆದರೆ ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 
ಕೆಲಕಾಲ ಕೃತಕ ಉಸಿರಾಟದ ಸಾಧನ ತೆರುವುಗೊಳಿಸಿ ಸಹಜ ಉಸಿರಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಗಂಟೆಗಳ ಕಾಲ ಸಹಜ ಉಸಿರಾಟದ ನಂತರ ಮತ್ತೆ ತೊಂದರೆ ಕಂಡು ಬಂದರೆ ಕೃತಕ ಉಸಿರಾಟ ಸಾಧನ ಅಳವಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.