ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಭಕ್ತರು ಆತಂಕ ಪಡುವ ಅಗತ್ಯವಿಲ್ಲ: ಶ್ರೀಗಳ ವೈದ್ಯ ಪರಮೇಶ್

ಅನಾರೋಗ್ಯಕ್ಕೀಡಾಗಿರುವ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಭಕ್ತರು ಆತಂಕ ಪಡುವ ಅಗತ್ಯವಿಲ್ಲ: ಶ್ರೀಗಳ ವೈದ್ಯ ಪರಮೇಶ್
ಸಂಗ್ರಹ ಚಿತ್ರ
Published On :
ತುಮಕೂರು: ಅನಾರೋಗ್ಯಕ್ಕೀಡಾಗಿರುವ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ ಹೇಳಿದ್ದಾರೆ.
ಶಿವಕುಮಾರ ಸ್ವಾಮಿಗಳ ಅನಾರೋಗ್ಯದ ಕುರಿತು ಭಕ್ತರಲ್ಲಿ ಆತಂಕ ಮನೆ ಮಾಡಿದ್ದು, ತುಮಕೂರಿನ ಮಠದತ್ತ ಭಕ್ತಸಾಗರ ಧಾವಿಸುತ್ತಿರುವಂತೆಯೇ ಇತ್ತ ಮಠದ ಅವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳ ಆಪ್ತ ವೈದ್ಯ ಪರಮೇಶ್ ಅವರು, ಅನಾರೋಗ್ಯಕ್ಕೀಡಾಗಿರುವ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು  ಹೇಳಿದರು. 
'ಸಿದ್ದಗಂಗಾ ಶ್ರೀಗಳು ಮಠಕ್ಕೆ ಹೋಗಲೇ ಬೇಕು ಎಂದು ಪಟ್ಟು ಹಿಡಿದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಕರೆತರಲಾಗಿದೆ. ಶ್ರೀಗಳಿಗೆ ಸೋಂಕು ಕಡಿಮೆಯಾಗಿದ್ದು, ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಾಣುತ್ತಿದೆ. ಸೂಕ್ತ ಚಿಕಿತ್ಸೆ ನೀಡಲಾಗುವುದು. ಕಳೆದ ಒಂದು ತಿಂಗಳಿನಿಂದ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿರಲಿಲ್ಲ. ಆದರೆ ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ಕೆಲ ದಿನಗಳ ಬಳಿಕ ಚೇತರಿಕೆ ಕಾಣುವ ವಿಶ್ವಾಸವಿದೆ. ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ' ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್​ ಅವರು ಸ್ಪಷ್ಟಪಡಿಸಿದ್ದಾರೆ. 
ಕಿರಿಯ ಶ್ರೀಗಳೊಂದಿಗೆ ಸಿಎಂ ಎಚ್ ಡಿಕೆ ನಿರಂತರ ಸಂಪರ್ಕ
ಶ್ರೀಗಳ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದ್ದು, ಇಂದು ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, 'ಶ್ರೀಗಳು ಎಲ್ಲವನ್ನೂ ಜಯಿಸಿಕೊಂಡು ಬಂದಿದ್ದಾರೆ. ಆರೋಗ್ಯ ಸಮಯವಾದ್ರೂ ಅವರು ಗೆಲ್ಲುತ್ತ ಬಂದಿದ್ದಾರೆ. ಉತ್ತರಾಯಣ ಪುಣ್ಯ ಕಾಲ ಆರಂಭವಾಗಿದೆ. ಪುಣ್ಯಕಾಲದಲ್ಲಿ ಭಗವಂತ ಕರೆದಾಗ ತೆರಳುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.