ರಾಜ್ಯ

ಬರಪೀಡಿತ ಜಿಲ್ಲೆಗಳಲ್ಲಿ ಬಿಜೆಪಿ ನಾಳೆಯಿಂದ ಪ್ರವಾಸ

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ಏಳು ಸದಸ್ಯರ ತಂಡ ...

ಬರಪೀಡಿತ ಜಿಲ್ಲೆಗಳಲ್ಲಿ ಬಿಜೆಪಿ ನಾಳೆಯಿಂದ ಪ್ರವಾಸ
ಬಿ ಎಸ್ ಯಡಿಯೂರಪ್ಪ
Published On :

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರ ಏಳು ಸದಸ್ಯರ ತಂಡ ನಾಲ್ಕು ಬರಗಾಲಪೀಡಿತ ಜಿಲ್ಲೆಗಳಲ್ಲಿ ನಾಳೆಯಿಂದ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಂಡ ಬರಗಾಲ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.
ಸರ್ಕಾರ ಕೈಗೊಂಡಿರುವ ಬರ ಜಿಲ್ಲೆಗಳಿಗೆ ಪರಿಹಾರಗಳ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲು ಬಿಜೆಪಿ ಯತ್ನಿಸಲಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಜೆಪಿ ನಾಳೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ನಾಡಿದ್ದು ಮಂಗಳವಾರ ಯಡಿಯೂರಪ್ಪನವರು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಬರಪರಿಸ್ಥಿತಿ ಕುರಿತು ಅಧ್ಯಯನ ನಡೆಸಲಿದ್ದಾರೆ. ತಂಡದಲ್ಲಿ ವಿಧಾನ ಪರಿಷತ್ ಸದಸ್ಯ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್, ಮಾಜಿ ಸಚಿವರಾದ ಬಿ ಎನ್ ಬಚ್ಚೇಗೌಡ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಪಕ್ಷದ ಹಿರಿಯ ಕಾರ್ಯಕಾರಿ ಜಯದೇವ್, ಮರಿಸ್ವಾಮಿ ಮತ್ತು ವೆಂಕಟಮುನಿಯಪ್ಪ ಮತ್ತು ಇತರ ಸದಸ್ಯರು ಕೂಡ ಇರಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.