ಕೈ ಶಾಸಕರ ಮಾರಾಮಾರಿ: ಆನಂದ್ ಸಿಂಗ್ ತಲೆಗೆ 12 ಹೊಲಿಗೆ!?
ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕ ಕಂಪ್ಲಿ ಗಣೇಶ್-ಆನಂದ್ ಸಿಂಗ್ ನಡುವೆ ನಡೆದ ಮಾರಾಮಾರಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾಸಕ ಆನಂದ್ ಸಿಂಗ್ ಅವರ ತಲೆಗೆ 12 ಹೊಲಿಗೆ

Published On :
ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕ ಕಂಪ್ಲಿ ಗಣೇಶ್-ಆನಂದ್ ಸಿಂಗ್ ನಡುವೆ ನಡೆದ ಮಾರಾಮಾರಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾಸಕ ಆನಂದ್ ಸಿಂಗ್ ಅವರ ತಲೆಗೆ 12 ಹೊಲಿಗೆ ಹಾಕಲಾಗಿದೆ.
ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು, 12 ಹೊಲಿಗೆ ಹಾಕಲಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಪ್ರಾರಂಭದಲ್ಲಿ ಹಲ್ಲೆಯ ವಿಷಯವನ್ನು ಮುಚ್ಚಿಡಲು ಕಾಂಗ್ರೆಸ್ ನಾಯಕರು ಪ್ರಯತ್ನಿಸಿದ್ದರು. ಆದರೆ ಸುದ್ದಿ ಬಹಿರಂಗವಾಗಿದ್ದು 12 ಹೊಲಿಗೆ ಹಾಕಲಾಗಿದೆ ಎಂಬುದು ತಿಳಿದುಬಂದಿದೆ.
ತಲೆಗೆ ಪೆಟ್ಟು ಬಿದ್ದಿರುವ ಆನಂದ್ ತಲೆಗೆ ಸಿಟಿ ಸ್ಕ್ಯಾನ್ ತಪಾಸಣೆ ಮಾಡಲಾಗಿದ್ದು, ವರದಿಗಳು ಬಂದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


