ಹೊಸದಾಗಿ ಮದ್ವೆ ಆಗಿದ್ದೀನಿ, ಹೊಸ ಹುರುಪಿನಲ್ಲಿದ್ದೀನಿ, ರಜೆ ನೀಡಿ: ವೈರಲ್ ಆಯ್ತು ಪೊಲೀಸಪ್ಪನ ರಜೆ ಅರ್ಜಿ!
ನವ ವಿವಾಹಿತ ಪೊಲೀಸ್ ಪೇದೆಯೊಬ್ಬರು ರಜೆ ಕೋರಿ ಸಲ್ಲಿಸಿದ್ದ ಅರ್ಜಿಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

Published On :
ಬೆಂಗಳೂರು: ನವ ವಿವಾಹಿತ ಪೊಲೀಸ್ ಪೇದೆಯೊಬ್ಬರು ರಜೆ ಕೋರಿ ಸಲ್ಲಿಸಿದ್ದ ಅರ್ಜಿಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಹೌದು.. ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ನವ ವಿವಾಹಿತ ಪೊಲೀಸ್ ಪೇದೆಯೊಬ್ಬರು ರಜೆ ಕೋರಿ ಅರ್ಜಿ ಸಲ್ಲಿಸಿದ್ದು, ಪೇದೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
'ನಾನು ಹೊಸದಾಗಿ ಮದುವೆ ಆಗಿದ್ದೀನಿ. ಅಲ್ಲದೇ ಹೊಸ ಹುರುಪಿನಲ್ಲಿ ಇದ್ದೀನಿ. ಹಾಗಾಗಿ ನನಗೆ 10 ದಿನ ಪರಿವರ್ತಿತ ರಜೆ ಅಥವಾ ಗಳಿಕೆ ರಜೆ ನೀಡಿ' ಎಂದು ಪೇದೆಯೊಬ್ಬರು ವಿನೂತನವಾಗಿ ರಜೆ ಪತ್ರವನ್ನು ಬರೆದಿದ್ದಾರೆ. ಇನ್ನು ಪೇದೆಯ ಪತ್ರ ವ್ಯಾಪಕ ವೈರಲ್ ಆಗುತ್ತಿದ್ದು, ಹೊಸ ಮದುವೆ ಗಂಡಿಗೆ ರಜೆ ನೀಡಿ ಎಂದು ಹಾಸ್ಯ ಮಾಡಿ ಟ್ರೋಲ್ ಮಾಡಲಾಗುತ್ತಿದೆ.
ಇಷ್ಟಕ್ಕೂ ಪತ್ರದಲ್ಲಿ ಏನಿದೆ?
ನನಗೆ ಹೊಸದಾಗಿ ಮದುವೆ ಆಗಿದ್ದು, ಹೊಸ ಹುರುಪು ಇದೆ. ನಮ್ಮ ಊರಿನಲ್ಲಿ ನಮ್ಮ ಮನೆ ದೇವರ ಪೂಜಾ ಕಾರ್ಯಕ್ರಮ ಇರುವ ಕಾರಣ ನನಗೆ ಫೆಬ್ರವರಿ 24ರಿಂದ ಮಾರ್ಚ್ 5ರವರೆಗೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ 10 ದಿನಗಳ ವರೆಗೆ ಪರಿವರ್ತಿತ ರಜೆ ಅಥವಾ ಗಳಿಕೆ ರಜೆಯನ್ನು ಮಂಜೂರು ಮಾಡಬೇಕಾಗಿ ನಿವೇದಿಸಿಕೊಳ್ಳುತ್ತೇನೆ ಎಂದು ವಿನೂತನವಾಗಿ ಬೇಗೂರು ಪೊಲೀಸ್ ಠಾಣೆಗೆ ರಜೆ ಪತ್ರ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurukarnataka policeಕರ್ನಾಟಕ ಪೊಲೀಸ್Leave letterViral Newsವೈರಲ್ ಸುದ್ದಿNewly marriedನವ ವಿವಾಹಿತರಜೆ ಅರ್ಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


