ಮಕ್ಕಳು ಭೋಜನ ಸ್ವೀಕರಿಸಿದ ನಂತ್ರ ನನ್ನ ಸಾವಿನ ಸುದ್ದಿ ಪ್ರಕಟಿಸಿ, ದಾಸೋಹಿ ಶ್ರೀಗಳು
ತ್ರಿವಿಧ ದಾಸೋಹದ ಮೂಲಕವೇ ಜಗತ್ತಿನಲ್ಲಿ ಸಿದ್ದಗಂಗಾ ಮಠ ಪ್ರಖ್ಯಾತಿ ಪಡೆದಿದೆ. ಇನ್ನು ಮಠದ ಶ್ರೀಗಳಾದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯದಲ್ಲಿಯೂ ಮನವೀಯತೆ ಮೆರೆದಿದ್ದಾರೆ.

Published On :
ತುಮಕೂರು: ತ್ರಿವಿಧ ದಾಸೋಹದ ಮೂಲಕವೇ ಜಗತ್ತಿನಲ್ಲಿ ಸಿದ್ದಗಂಗಾ ಮಠ ಪ್ರಖ್ಯಾತಿ ಪಡೆದಿದೆ. ಇನ್ನು ಮಠದ ಶ್ರೀಗಳಾದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯದಲ್ಲಿಯೂ ಮನವೀಯತೆ ಮೆರೆದಿದ್ದಾರೆ.
ಮಕ್ಕಳೆಂದರೆ ಶಿವಕುಮಾರ ಸ್ವಾಮೀಜಿಗಳಿಗೆ ಹೆಚ್ಚು ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆಯೇ ಕಳೆದಿದ್ದರು. ಹೀಗಾಗಿ ತಾವು ಮೃತಪಟ್ಟ ಸುದ್ದಿಯನ್ನು ಮಕ್ಕಳು ಮಧ್ನಾಹ್ನದ ಭೋಜನ ಸ್ವೀಕರಿಸಿದ ನಂತರ ಪ್ರಕಟಿಸಬೇಕು ಎಂದು ಶ್ರೀಗಳು ಮೊದಲೇ ಮಠದ ಸಿಬ್ಬಂದಿಗೆ ತಿಳಿಸಿದ್ದರು ಎಂದು ಹೇಳಲಾಗುತ್ತಿದೆ.
ಶಿವಕುಮಾರ ಸ್ವಾಮೀಜಿಗಳ ಆಶಯದಂತೆ ಬೆಳಗ್ಗೆ 11.44ಕ್ಕೆ ಶಿವೈಕ್ಯರಾಗಿದ್ದರೂ ಅಧಿಕೃತವಾಗಿ ಮೃತಪಟ್ಟ ಸುದ್ದಿಯನ್ನು ಪ್ರಕಟಿಸಲಿಲ್ಲ. ಮಧ್ಯಾಹ್ನ ವಿದ್ಯಾರ್ಥಿಗಳು ಭೋಜನವನ್ನು ಸ್ವೀಕರಿಸಿದ ಬಳಿಕ ಮಧ್ಯಾಹ್ನ 1.50ಕ್ಕೆ ಅಧಿಕೃತವಾಗಿ ಶ್ರೀಗಳು ಲಿಂಗೈಕ್ಯರಾದ ಸುದ್ದಿಯನ್ನು ಪ್ರಕಟಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


