ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು- ಖರ್ಗೆ ಒತ್ತಾಯ
ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಬಡ ಹಾಗೂ ತುಳಿತಕ್ಕೊಳಗಾದ ಜನರ ಶಿಕ್ಷಣ ಮಟ್ಟ ಸುಧಾರಿಸುವಲ್ಲಿ ಶ್ರೀಗಳು ಶ್ರಮಿಸಿದ್ದು, ಪ್ರತಿವರ್ಷ ಸಾವಿರಾರು ಮಕ್ಕಳಿಗೆ ಆಹಾರ, ವಸತಿ ಒದಗಿಸಿದ್ದಾರೆ. ದೇಶದ ಅತ್ಯುನ್ನತ ಪ್ರಶಸ್ತಿ ಪಡೆಯಲು ಅವರು ಅರ್ಹರಾಗಿದ್ದು ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಅವರು ಹೇಳಿದರು.
ಶಿವಕುಮಾರ ಸ್ವಾಮೀಜಿಗಳ ನಿಧನದಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಎಲ್ಲಾ ಪ್ರಧಾನ ಮಂತ್ರಿಗಳನ್ನು ನೋಡಿದ್ದಾರೆ. ಸಮಾಜದ ತುಳಿತಕ್ಕೊಳಗಾದ ಮಕ್ಕಳಿಗೂ ಸಂಸ್ಕೃತ ಕಲಿಸಿದ್ದಾರೆ. ಬಡ ಸಮುದಾಯದಿಂದ ಬಂದು ದೊಡ್ಡ ಸೇವೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಶಿಕ್ಷಣ ಹೊರತುಪಡಿಸಿದರೆ ಬೇರೆ ಯಾವುದೇ ವಿಚಾರಗಳಲ್ಲಿಯೂ ಶ್ರೀಗಳು ಹಸ್ತಕ್ಷೇಪ ಮಾಡುತ್ತಿರಲಿಲ್ಲ. ಅವರ ನಿಧನದವರೆಗೂ ಶಿಕ್ಷಣವೇ ಅವರ ಗುರಿಯಾಗಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


