ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ನೀಡಿದ್ರೆ ಆ ಪ್ರಶಸ್ತಿಗೆ ಗೌರವ ಹೆಚ್ಚುತ್ತದೆ: ಬಾಬಾ ರಾಮ್‌ದೇವ್
ನಡೆದಾಡುವ ದೇವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಬೆನ್ನಲ್ಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬ ಕೂಗು...

Published On :
ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಬೆನ್ನಲ್ಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬ ಕೂಗು ಜೋರಾಗುತ್ತಿದ್ದು ಈ ಮಧ್ಯೆ ಯೋಗ ಗುರು ಬಾಬಾ ರಾಮ್‌ದೇವ್ ಸಹ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರತ್ನ ಶಿವಕುಮಾರ ಸ್ವಾಮೀಜಿ ಅಂತಿಮ ದರ್ಶನ ಪಡೆಯುವ ಸಲುವಾಗಿ ಬೆಂಗಳೂರಿಗೆ ಆಗಮಿಸಿದ ಬಾಬಾ ರಾಮ್‌ದೇವ್ ಅವರು, ಶಿವಕುಮಾರ ಸ್ವಾಮೀಜಿಗಳಿಗೆ 'ಭಾರತ ರತ್ನ' ಪ್ರಶಸ್ತಿ ನೀಡಿದರೆ ಈ ಪ್ರಶಸ್ತಿಯ ಗೌರವ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ಭಾರತ ರತ್ನ ಪ್ರಶಸ್ತಿಯನ್ನು ಕ್ರೀಡೆ, ಸಂಗೀತ, ರಾಜಕೀಯ ವ್ಯಕ್ತಿಗಳಿಗೆ ನೀಡಬಹುದಾದರೆ ತ್ರಿವಿಧ ದಾಸೋಹಿಗೆ ಯಾಕೆ ನೀಡಿ ಗೌರವಿಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
111 ವರ್ಷಗಳ ಕಾಲ ಸುದೀರ್ಘ ಬಾಳಿದ್ದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಬೆಳ್ಳಗೆ 11.44ರ ಸುಮಾರಿಗೆ ಲಿಂಗೈಕ್ಯರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಅಂತಿಮ ದರ್ಶನಕ್ಕೆ ಹಣಿ ಮಾಡಲಾಗಿದ್ದು ಲಕ್ಷಾಂತರ ಮಂದಿ ಭಕ್ತರು ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
TumkurShivakumara SwamijiBharat Ratnaಭಾರತ ರತ್ನBaba Ramdevಬಾಬಾ ರಾಮ್ದೇವ್ಶಿವಕುಮಾರ ಸ್ವಾಮೀಜಿSiddaganga Seerಸಿದ್ದಗಂಗಾ ಶ್ರೀ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


