ಶ್ರೀಗಳು ನನ್ನನ್ನು ಮಗನಂತೆ ನೋಡುತ್ತಿದ್ದರು: ಪ್ರಧಾನಿ ಮೋದಿ ಸಂತಾಪ
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ

Published On :
ವಾರಣಾಸಿ: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಾರಾಣಸಿಯಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿದ್ದಗಂಗಾ ಶ್ರೀಗಳನ್ನು ನೆನಪಿಸಿಕೊಂಡರು.
ಪ್ರತಿ ಬಾರಿ ತುಮಕೂರು ಸಮೀಪದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದಾಗ ಹಲವರು ಬಾರಿ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ. ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಅವರು ಸಮಾಜಕ್ಕೆ, ಮಾನವ ಕಲ್ಯಾಣಕ್ಕೆ ನೀಡಿರುವ ಕೊಡುಗೆ ಅನನ್ಯ. ಮಹಾನ್ ಸಂತ, ಮಹಾನ್ ಋಷಿ ಅಗಲಿಕೆ ನಮಗೆ ತುಂಬಲಾರದ ನಷ್ಟವಾಗಿದೆ ಎಂದು ಮೋದಿ ಹೇಳಿದರು.
ಈ ನಡುವೆ ಮಠಕ್ಕೆ ಜನಸಾಗರವೇ ಹರಿದುಬರುತ್ತಿದೆ. ಮಠಕ್ಕೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


