ರಾಜ್ಯ

ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನ ಪಡೆದ ನಿರ್ಮಲಾ ಸೀತಾರಾಮನ್, ಬಾಬಾ ರಾಮ್ ದೇವ್

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಅವರು ಸೋಮವಾರ ಲಿಂಗೈಕ್ಯರಾದ ತ್ರಿವಿಧ ದಾಸೋಹಿ...

ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನ ಪಡೆದ ನಿರ್ಮಲಾ ಸೀತಾರಾಮನ್, ಬಾಬಾ ರಾಮ್ ದೇವ್
ಸಿದ್ಧಗಂಗಾ ಶ್ರೀ
Published On :
ತುಮಕೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಅವರು ಸೋಮವಾರ ಲಿಂಗೈಕ್ಯರಾದ ತ್ರಿವಿಧ ದಾಸೋಹಿ, ಕಾಯಕಯೋಗಿ ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ನಿರ್ಮಲಾ ಸೀತಾರಾಮನ್ ಅವರು ಇಂದು ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಆಗಮಿಸಿದ್ದು, ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ನರೇಂದ್ರ  ಮೋದಿ ಅವರೇ ಶ್ರೀಗಳ ಅಂತಿಮ ದರ್ಶನ ಪಡೆಯಬೇಕಿತ್ತು. ಆದರೆ ಎಸ್​ಪಿಜಿಯಿಂದ ಕ್ಲಿಯರೆನ್ಸ್ ಸಿಗದ ಕಾರಣ  ಹಾಗೂ ಭದ್ರತೆ,  ಜನರ ಅನುಕೂಲದ ದೃಷ್ಟಿಯಿಂದ ಅವರು ತುಮಕೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಅವರ ಸರ್ಕಾರದ ಪರವಾಗಿ ರಕ್ಷಣಾ ಸಚಿವರು ಆಗಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.