ಈ ವಾರಾಂತ್ಯ ಕೆಎಸ್ಆರ್ ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ
ವಾರಾಂತ್ಯ ಗಣರಾಜ್ಯೋತ್ಸವ ಇರುವುದರಿಂದ ರಜೆ ಸಂದರ್ಭದಲ್ಲಿ ವಿವಿಧ ಸ್ಥಳಗಳಿಗೆ ತೆರಳುವವರಿಗೆ ರಾಜ್ಯ...

ಬೆಂಗಳೂರು: ವಾರಾಂತ್ಯ ಗಣರಾಜ್ಯೋತ್ಸವ ಇರುವುದರಿಂದ ರಜೆ ಸಂದರ್ಭದಲ್ಲಿ ವಿವಿಧ ಸ್ಥಳಗಳಿಗೆ ತೆರಳುವವರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮ 200 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ನಾಳೆಯಿಂದ ಭಾನುವಾರದವರೆಗೆ 3 ದಿನಗಳ ಕಾಲ ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ಬಸ್ ಸಂಚರಿಸಲಿವೆ.
ಬೆಂಗಳೂರಿನ ಕೆಂಪೇಗೌಡ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಿಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮತ್ತು ಇನ್ನೂ ಕೆಲವು ಕಡೆಗಳಿಗೆ ಬಸ್ ಸಂಚರಿಸಲಿವೆ.
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ನ, ವಿರಾಜ್ ಪೇಟೆ, ಕುಶಾಲನಗರ ಮತ್ತು ಮಡಿಕೇರಗಳಿಗೆ ಬಸ್ ಸಂಚರಿಸಲಿವೆ. ಶಾಂತಿನಗರದಿಂದ ಮಧುರೈ, ಕುಂಬಕೋಣಂ, ತ್ರಿಚಿ, ಚೆನ್ನೈ, ಕೊಯಂಬತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತು ತಮಿಳು ನಾಡು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಬಸ್ ವ್ಯವಸ್ಥೆಯಿರುತ್ತದೆ.
ವಿಶೇಷ ಬಸ್ಸುಗಳು ಬೆಂಗಳೂರಿನ ಬಸವೇಶ್ವರ ನಗರ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಕ್ರಾಸ್, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಸ್ಯಾಟಲೈಟ್ ಟೌನ್ ನಿಂದ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ ಮತ್ತು ಇತರ ಸ್ಥಳಗಳಿಗೆ ಬಸ್ ತೆರಳುತ್ತದೆ.
ವಿಶೇಷ ಬಸ್ಸುಗಳಿಗೆ ಕಂಪ್ಯೂಟರೀಕೃತ ಕಾಯ್ದಿರಿಸಿದ್ದ ಟಿಕೆಟ್ ಬುಕ್ ಮಾಡಬಹುದು. ಕೆಎಸ್ಆರ್ ಟಿಸಿ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ಮಾಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


