ಸಾಲುಮರದ ತಿಮ್ಮಕ್ಕ ಸೇರಿ ಐವರಿಗೆ ಪದ್ಮಶ್ರೀ: 6 ಕೋಟಿ ಕನ್ನಡಿಗರಿಗೆ ಒಂದೂ ಇಲ್ಲ ವಿ'ಭೂಷಣ'!
ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೀಡುವ ಭಾರತ ರತ್ನ ಹಾಗೂ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಹೆಸರನ್ನು ...

Published On :
ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೀಡುವ ಭಾರತ ರತ್ನ ಹಾಗೂ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಹೆಸರನ್ನು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ನಾಲ್ವರಿಗೆ ಪದ್ಮ ವಿಭೂಷಣ ಪ್ರಶಸ್ತಿ, 14 ಮಂದಿಗೆ ಪದ್ಮ ಭೂಷಣ ಮತ್ತು 94 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಒಟ್ಟು 112 ಮಂದಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿದ್ದಾರೆ.
ಕರ್ನಾಟಕದಿಂದ ಮಹಾ ಸಾಧಕಿ ಸಾಲು ಮರದ ತಿಮ್ಮಕ್ಕ, ಖ್ಯಾತ ನೃತ್ಯಪಟು ಪ್ರಭುದೇವ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್, ಕಲೆ ಮತ್ತು ಪುರಾತತ್ವ ಶಾಸ್ತ್ರವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿದ ಸಾಧಕಿ ಶಾರದಾ ಶ್ರೀನಿವಾಸನ್, ಬೆಂಗಳೂರಿನ ಐಐಎಸ್‌ಸಿಯಲ್ಲಿ ಪರಮಾಣು ಭೌತಶಾಸ್ತ್ರ ಪ್ರೊಫೆಸರ್ ಆಗಿರುವ ರೋಹಿಣಿ ಗೋಡ್ಬೋಳೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡಿಗರು.
ವಿಪರ್ಯಾಸವೆಂದರೇ ರಾಜ್ಯಕ್ಕೆ ಈ ಬಾರಿ ಪದ್ಮವಿಭೂಷಣ, ಪದ್ಮಭೂಷಣ ವಿಭಾಗದಲ್ಲಿ ಯಾವುದೇ ಪ್ರಶಸ್ತಿ ಬಂದಿಲ್ಲ.
ಕೇಂದ್ರ ಸರ್ಕಾರ ಈಗಲಾದರೂ ನನ್ನನ್ನು ಗುರುತಿಸಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಸಾಲಮರದ ತಿಮ್ಮಕ್ಕ ಸಂತೋಷ ವ್ಯಕ್ತ ಪಡಿಸಿದ್ದಾರೆ.ಕುದೂರಿನಲ್ಲಿ ತಿಮ್ಮಕ್ಕ 384 ಮರಗಳನ್ನು ನೆಟ್ಟು ಬೆಳೆಸಿದ್ದಾರೆ, ಎಂದು ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಹೇಳಿದ್ದಾರೆ.
ಅವರ ಕೆಲಸವನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಚಾರ, ಅವರು ಭಾರತ ರತ್ನಕ್ಕೆ ಅರ್ಹರು ಎಂದು ಹೇಳಿದ್ದಾರೆ, ಕಳೆದ 7 ದಶಕಗಳಿಂದ ಆಕೆ ಮಾಡಿರುವ ಕೆಲಸಕ್ಕೆ ಪ್ರಶಸ್ತಿ ನೀಡುವ ಬದಲು ಸರ್ಕಾರ ಆಕೆ ಗೌರವ ಪೂರ್ಣ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಹೇಳಿದ್ದಾರೆ,.
ಪ್ರಶಸ್ತಿಗೆ ಭಾಜನಗಾರಿರುವ ಐವರು ತಮ್ಮ ಸಂತೋಷ ವ್ಯಕ್ತ ಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಐವರು ಸಾಧಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ,
ಪದ್ಮಶ್ರೀ ಹೊರತಾಗಿ ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗೆ ರಾಜ್ಯದ ಯಾವುದೇ ಸಾಧಕರು ಆಯ್ಕೆಯಾಗಿಲ್ಲ. ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನವು ಸಿದ್ದಗಂಗಾ ಶ್ರೀಗಳಿಗೆ ನೀಡಲಿಲ್ಲವೆಂದು ಅನೇಕರು ಅಸಮಾಧನ ಹೊರಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಪದ್ಮಶ್ರೀಸಾಲು ಮರದ ತಿಮ್ಮಕ್ಕ70th Republic Day70ನೇ ಗಣರಾಜ್ಯೋತ್ಸವPadma Shri Awardsalu marada thimmakka
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


