ರಾಜ್ಯ

ಕೊಪ್ಪಳ: ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯದಲ್ಲೇ ಶಿಕ್ಷಕ ಸಾವು!

ಗಣರಾಜ್ಯೋತ್ಸವದಂದು ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮಾರ್ಗಮದ್ಯದಲ್ಲೇ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ: ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯದಲ್ಲೇ ಶಿಕ್ಷಕ ಸಾವು!
ಸಂಗ್ರಹ ಚಿತ್ರ
Published On :
ಕೊಪ್ಪಳ: ಗಣರಾಜ್ಯೋತ್ಸವದಂದು ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮಾರ್ಗಮದ್ಯದಲ್ಲೇ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ನಗರ ಕಿನ್ನಾಳ ರಸ್ತೆಯಲ್ಲಿ ಈ ಘಟನೆ ನಡೆಇದ್ದು ಕೂಕನಪಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗಪ್ಪ ಏಳುಭಾವಿ (50) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
 ಅಧಿಕ ರಕ್ತದೊತ್ತದಡಿಂದ ಬಳಲುತ್ತಿದ್ದ ನಾಗಪ್ಪ ಇಂದು ಶಾಲೆಯಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ನಡೆದುಕೊಂಡು ಹೊರಟಿದ್ದರು.
ಘಟನೆ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ನಗರ ಪೋಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.