ರಾಜ್ಯ

ಮುಸ್ಲಿಂ ಆಗಿ ಹುಟ್ಟಿದ್ದರೂ ನಾವೆಲ್ಲರೂ ಹೆಮ್ಮೆಯ ಭಾರತೀಯರು' - ಅನಂತ್ ಕುಮಾರ್ ಹೆಗಡೆ ವಿರುದ್ಧ ತಬೂ ರಾವ್ ಕಿಡಿ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಮುಸ್ಲಿಂ ಹೆಂಗಸಿನ ಹಿಂದೆ ಓಡಿ ಹೋದವನು ಎಂದೆಲ್ಲ ಹೀಯಾಳಿಸಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮಾಡಿರುವ ಟ್ವೀಟ್ ಗೆ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ಕಿಡಿಕಾರಿದ್ದಾರೆ

ಮುಸ್ಲಿಂ ಆಗಿ ಹುಟ್ಟಿದ್ದರೂ ನಾವೆಲ್ಲರೂ ಹೆಮ್ಮೆಯ ಭಾರತೀಯರು' - ಅನಂತ್ ಕುಮಾರ್ ಹೆಗಡೆ ವಿರುದ್ಧ ತಬೂ ರಾವ್ ಕಿಡಿ
ತಬೂ ರಾವ್, ಅನಂತ್ ಕುಮಾರ್ ಹೆಗಡೆ
Published On :

ಬೆಂಗಳೂರು:  ಕೆಪಿಸಿಸಿ  ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಮುಸ್ಲಿಂ  ಹೆಂಗಸಿನ ಹಿಂದೆ ಓಡಿ ಹೋದವನು  ಎಂದೆಲ್ಲ ಹೀಯಾಳಿಸಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮಾಡಿರುವ ಟ್ವೀಟ್ ಗೆ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ಕಿಡಿಕಾರಿದ್ದಾರೆ.

ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ ಮತ್ತು ಶೋಭಾ ಕರಂದ್ಲಾಜೆ ಬಳಿಕ ಇದೀಗ ಅನಂತ ಕುಮಾರ್ ಅವರ ಸರದಿ ಬಂದಂತೆ ಇದೆ. ನಾನು ಖಂಡಿತ ರಾಜಕಾರಣಿ ಅಲ್ಲ, ನಾನು ಒಬ್ಬ ಖಾಸಗಿ ವ್ಯಕ್ತಿ, ಮೇಲಾಗಿ  ಎರಡು ಮಕ್ಕಳ ತಾಯಿ ಮತ್ತು ಗೃಹಿಣಿ ,ನಾನು ಯಾವುದೇ ಪಕ್ಷ ಅಥವಾ ಸಾರ್ವಜನಿಕ ಸ್ಥಾನಗಳನ್ನು ಹೊಂದಿಲ್ಲ ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹೌದು ನಾನು ಜನ್ಮತ: ಮುಸ್ಲಿಂ ಆಗಿ  ಹುಟ್ಟುದ್ದೇನೆ. ಆದರೆ, ನಾವೆಲ್ಲರೂ ಭಾರತೀಯರೆಂಬ ಹೆಮ್ಮೆ ಇದೆ.  ಪ್ರತಿಯೊಬ್ಬರಿಗೂ  ಮುಕ್ತ ಚಿಂತನೆ, ಅಭಿವ್ಯಕ್ತಿ, ನಂಬಿಕೆಯ ಜಾತ್ಯತೀತ ತತ್ವದ ಆಧಾರದ ಮೇಲೆ ಭಾರತೀಯ ಸಂವಿಧಾನ ರೂಪುಗೊಂಡಿದೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಯಾವುದೇ ರೀತಿಯ ವೈಯಕ್ತಿಕ ಹೇಳಿಕೆ ನೀಡುವುದಿಲ್ಲ, ಇಂತಹ ಕೀಳುಮಟ್ಟದ ರಾಜಕೀಯವನ್ನು ಖಂಡಿಸುತ್ತೇನೆ. ಒಂದು ವೇಳೆ ಅವರಿಗೆ ತಾಕತ್ತು ಇದ್ದರೆ  ರಾಜಕೀಯದಲ್ಲಿ ತಮ್ಮ ಪತಿಯನ್ನು ಎದುರುಸಲಿ. ಇಂತಹ ಪ್ರಚೋದನಾಕಾರಿ ಹೇಳಿಕೆಗಳು ಕೇಂದ್ರ ಸಚಿವರಿಗೆ ಶೋಭೆ ತರುವಂತಹದ್ದಲ್ಲ ಎಂದಿದ್ದಾರೆ.
ಈ ಮಧ್ಯೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕೂಡಾ ಅನಂತ್ ಕುಮಾರ್  ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಹಾಗೂ ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.