ಮೈಸೂರಿನಲ್ಲಿ ಭೀಕರ ಅಪಘಾತ: ಬೈಕ್‍ಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ನವ ವಿವಾಹಿತ ದುರ್ಮರಣ!
ಕೆಎಸ್‌ಆರ್‌ಟಿಸಿ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಬೈಕ್ ಮೇಲೆ ಬಸ್ ಹರಿಸಿ ಪರಿಣಾಮ ನವ ವಿವಾಹಿತನೊಬ್ಬ ದಾರುಣ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆಯಲ್ಲಿ ನಡೆದಿದೆ.

Published On :
ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಬೈಕ್ ಮೇಲೆ ಬಸ್ ಹರಿಸಿ ಪರಿಣಾಮ ನವ ವಿವಾಹಿತನೊಬ್ಬ ದಾರುಣ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆಯಲ್ಲಿ ನಡೆದಿದೆ.
ನವ ವಿವಾಹಿತ 26 ವರ್ಷದ ಬಾಗಲಕೋಟೆಯ ಮನೀಶ್ ಮೃತ ದುರ್ದೈವಿ. ಮನೀಶ್ ಪತ್ನಿ ಜೊತೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶಕ್ಕೆ ಪ್ರವಾಸಕ್ಕಾಗಿ ಬಂದಿದ್ದರು. ಪ್ರವಾಸ ಮುಗಿಸಿ ಬೈಕ್ ನಲ್ಲಿ ವಾಪಸ್ ತೆರಳುವಾಗ ಸರಗೂರು-ಎಚ್ ಡಿ ಕೋಟೆ ರಸ್ತೆಯಲ್ಲಿ ವೇಗವಾಗಿ ಬಂದ ಸಾರಿಗೆ ಸಂಸ್ಥೆ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಮನೀಶ್ ಬೈಕ್ ಗೆ ಗುದ್ದಿದೆ.
ಡಿಕ್ಕಿಯ ರಭಸಕ್ಕೆ ಮನೀಶ್ ಕೆಳಗೆ ಬಿದ್ದಿದ್ದಾರೆ. ಆಗ ತಲೆ ಮೇಲೆ ಬಸ್ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲೇ ಮನೀಶ್ ಸಾವನ್ನಪ್ಪಿದ್ದಾನೆ. ಅದೃಷ್ಟವಶಾತ್ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೀಶ್ ಗೆ ಒಂದು ತಿಂಗಳ ಹಿಂದೆ ಮದುವೆಯಾಗಿದ್ದು ಪತಿಯನ್ನು ಕಳೆದುಕೊಂಡ ಪತ್ನಿಯ ಆಕ್ರಂದನ ನೋಡಿ ಸ್ಥಳೀಯರ ಕಣ್ಣುಗಳಲ್ಲೂ ನೀರು ತುಂಬಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


