ರಾಜ್ಯ

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆ

ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ..

ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿ, ನೊಂದ ಕ್ಯಾಬ್ ಚಾಲಕ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಕಾಂತರಾಜು ಮೃತ ದುರ್ದೈವಿ, ಈತ 10 ವರ್ಷಗಳ ಹಿಂದೆ ದೂರದ ಸಂಬಂಧಿ ಭಾಗ್ಯ ಎಂಬಾಕೆಯನ್ನು ವಿವಾಹವಾಗಿದ್ದ. ಈ ದಂಪತಿಗೆ 8 ವರ್ಷದ ಮಗು ಕೂಡ ಇದೆ. 
ಭಾಗ್ಯಳಿಗೆ ಸೋಲೂರಿನ ನಿವಾಸಿ ಕುಮಾರ್ ಎಂಬುವನ ಜೊತೆ ಸಂಬಂಧ ಇತ್ತು. ಇದನ್ನು ತಿಳಿದ ಕಾಂತರಾಜು ಪತ್ನಿಯಿಂದ ದೂರ ಇರುವಂತೆ ಆತನಿಗೆ ಎಚ್ಚರಿಕೆ ನೀಡಿದ್ದ., ಆದರೆ ಕಾಂತರಾಜು ಸಂಬಂಧಿ ಮಂಜ ಮತ್ತು ಆತನ ಪತ್ನಿ ಸುಶೀಲಾ ಕುಮಾರ್ ಗೆ ಬೆಂಬಲ ನೀಡಿದ್ದರು. 
ಇದರಿಂದಾಗಿ ಅವರಿಬ್ಬರು ಪರಾರಿಯಾಗಿದ್ದರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿರುವ ಕಾಂತರಾಜು ತನ್ನ ಸಾವಿಗೆ 4 ಜನ ಕಾರಣ ಎಂದು ಹೇಳಿದ್ದಾನೆ.
ಕಾಂತರಾಜು ಪೋಷಕರು ಕುದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಪರಾರಿಯಾದ ಭಾಗ್ಯ ಮತ್ತು ಕುಮಾರ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.