ಮೊಬೈಲ್ ಗೋಪುರದಿಂದ ಜಿಗಿದು ಯುವಕ ಆತ್ಮಹತ್ಯೆ
ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಮೊಬೈಲ್ ಟವರ್‌ನಿಂದ ಹಾರಿ 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

Published On :
ಕೆ.ಆರ್.ಪೇಟೆ: ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಮೊಬೈಲ್ ಟವರ್‌ನಿಂದ ಹಾರಿ 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.
ಮೃತ ಯುವಕನನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯರ ಪುತ್ರ ವಿಜಯ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಮೊಬೈಲ್ ಗೋಪುರದಿಂದ ಹಾರಿ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಜಯ ಕುಮಾರ್ ನನ್ನು ಗಮನಸಿದ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಯುವಕ ಆಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಎಂದು ಘೋಷಿಸಿದ್ದಾರೆ.
ಈ ಕುರಿತಂತೆ ಕೆ.ಆರ್.ಪೇಟೆ ಪೊಲೀಸರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


