ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಟಾಟಾ ಏಸ್-ಖಾಸಗಿ ಬಸ್ ಡಿಕ್ಕಿ, ಸ್ಥಳದಲ್ಲೇ 12 ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Published On :
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಇತರ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೋಲಾರ ಮತ್ತು ಚಿಂತಾಮಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಮುರುಗಮಲ್ಲದಿಂದ ಬಸ್ ಚಿಂತಾಮಣಿಯ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಖಾಸಗಿ ಬಸ್ ಚಾಲಕನ ಅತಿ ವೇಗವೇ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


