ಬೆಂಗಳೂರು- ಮೈಸೂರು ಮಾರ್ಗದ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ
ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುವ ಆರು ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ರೈಲ್ವೆ ಸುರಕ್ಷತಾ ಪಡೆ ' ಶಕ್ತಿ' ತಂಡವನ್ನು ರಚಿಸಿದೆ.

Published On :
ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುವ ಆರು ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ರೈಲ್ವೆ ಸುರಕ್ಷತಾ ಪಡೆ ' ಶಕ್ತಿ' ತಂಡವನ್ನು ರಚಿಸಿದೆ.
ರೈಲ್ವೆ ಸುರಕ್ಷತಾ ಪಡೆಯ 15 ಕಾನ್ಸ್ ಟೇಬಲ್ ಹಾಗೂ ಮುಖ್ಯ ಕಾನ್ಸ್ ಟೇಬಲ್ ಗಳನ್ನೊಳಗೊಂಡ ಈ ವಿಶೇಷ ತಂಡದಲ್ಲಿ ಎಲ್ಲರೂ ಮಹಿಳೆಯರೇ ಆಗಿದ್ದಾರೆ.ಶಕ್ತಿ ಸದಸ್ಯರು ಹಾಗೂ ಮಹಿಳಾ ಪ್ರಯಾಣಿಕರ ನಡುವೆ ವಾಟ್ಸಾಪ್ ಗ್ರೂಪ್ ಸೃಷ್ಟಿಸಲಾಗಿದೆ.ಕಡಿಮೆ ಅಂತರದ ಮಾರ್ಗದ ರೈಲುಗಳಲ್ಲಿ ಮಹಿಳಾ ಬೋಗಿಗಳಿಗೆ ಇವರು ಸಂಚರಿಸಲಿದ್ದು, ಅನಧಿಕೃತ್ಯ ವ್ಯಕ್ತಿಗಳು ಬೋಗಿಗೆ ಪ್ರವೇಶಿಸದಂತೆ ಮಾಡಲಾಗುತ್ತಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಆರ್ ಪಿಎಫ್ ಬೆಂಗಳೂರು ವಿಭಾಗದ ಹಿರಿಯ ವಿಭಾಗೀಯ ಸುರಕ್ಷತಾ ಆಯುಕ್ತೆ ದೆಬಾಸ್ಮಿತಾ ಚಟ್ಟೋಪಾಧ್ಯಾಯ ಬ್ಯಾನರ್ಜಿ,ಬೆಂಗಳೂರು- ಮೈಸೂರು ಮಾರ್ಗದಲ್ಲಿ ಅಸಂಖ್ಯಾತ ಮಹಿಳೆಯರು ಪ್ರಯಾಣಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಬೆಂಗಳೂರು ಹಾಗೂ ಬಂಗಾರಪೇಟೆ ನಡುವೆ ಇಂತಹ ವಿಶೇಷ ಭದ್ರತೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಟಿಪ್ಪು, ಚಾಮುಂಡಿ, ವಿಶ್ವಮಾನವ ಎಕ್ಸ್ ಪ್ರೆಸ್ ಸೇರಿದಂತೆ ಮತ್ತಿತರ ರೈಲುಗಳಲ್ಲಿ ಈ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ. ಕೆಂಗೇರಿ ಬಳಿ ಮಹಿಳಾ ಬೋಗಿಗೆ ಆಗಮಿಸಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಮಹಿಳಾ ಪ್ರಯಾಣಿಕರು ಸಂಕಷ್ಟದ ಸಂದರ್ಭದಲ್ಲಿ ಕೇವಲ ಒಂದು ಸಂದೇಶ ಕಳುಹಿಸಿದರೆ ಸಾಕು ನಾವು ಅಲ್ಲಿಗೆ ಬರುತ್ತೇವೆ ಎಂದು ಅವರು ಹೇಳಿದರು.
ರೈಲ್ವೆ ಸುರಕ್ಷತಾ ಪಡೆಯ ಈ ಕಾರ್ಯಕ್ಕೆ ಪ್ರಯಾಣಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮಹಿಳಾ ಬೋಗಿಗಳಿಂದ ಪುರುಷರನ್ನು ಹೊರಗೆ ಕಳುಹಿಸುವಾಗ ಮಹಿಳಾ ಪೊಲೀಸರ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಮುಂಬೈಯಲ್ಲೂ ಇಂತಹ ಹೆಜ್ಜೆ ಕೈಗೊಳ್ಳಲಾಗಿದೆ ಎಂದು ಬ್ಯಾನರ್ಜಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುWomen SafetytrainsBengaluru-Mysuruರೈಲುಗಳುಮಹಿಳೆಯರಿಗೆ ಸುರಕ್ಷತೆRPF Shakti Team ಬೆಂಗಳೂರುಆರ್ ಪಿಎಫ್ ಶಕ್ತಿ ತಂಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


