ಆರ್. ಅಶೋಕ್ ಹೆಸರು ಬಳಸಿ ಸಾಮಾಜಿಕ ತಾಣದಲ್ಲಿ ನಕಲಿ ಪೋಸ್ಟ್: ಇಬ್ಬರ ವಿರುದ್ಧ ಎಫ್ಐಆರ್
ಬಿಜೆಪಿ ನಾಯಕ ಆರ್ ಅಶೋಕ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಮಾದ್ಯಮಗಳಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡಿದ....

Published On :
ಬೆಂಗಳೂರು: ಬಿಜೆಪಿ ನಾಯಕ ಆರ್ ಅಶೋಕ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಮಾದ್ಯಮಗಳಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಬೆಂಗಳೂರು ಬಸವೇಶ್ವರ ನಗರ ಪೋಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಜೆಪಿ ನಾಯಕನ ಅನುಯಾಯಿ ಕೋದಂಡರಾಮ್ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಆರ್. ಅಶೋಕ್ ಮುಖ್ಯಂತ್ರಿ ಎಚ್.ಡಿ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ, ಆದಿಚುಂಚನಗಿರಿ ಮಠದ ಹಾಗೂ ಅಮೆರಿಕಾದಲ್ಲಿ ನಿರ್ಮಾಣಗೊಳ್ಳುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ನಿರ್ಮಾಣದ ವಿರುದ್ಧ ಮಾತನಾಡಿರುವಂತೆ ನಕಲಿ ಹೇಳಿಕೆಗಳನ್ನು ಸೃಷ್ಟಿಸಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರೆಂಬ ಆರೋಪ ಕೇಳಿಬಂದಿದೆ.
ಒಕ್ಕಲಿಗ ಸಮುದಾಯದ ವಾಟ್ಸ್ ಅಪ್ ಗ್ರೂಪ್ ನಲ್ಲಿ ಪ್ರಸಾರವಾದ ಪೋಸ್ಟ್‌ಗಳಲ್ಲಿ, ಅಶೋಕ್ ಮಠದ ವಿರುದ್ಧ ಹೇಳಿಕೆ ನೀಡಿದ್ದಾಗಿ ಪ್ರಸಾರವಾಗಿದೆ.
ಇದೀಗ ಪೋಲೀಸರು ದೂರಿನ ಹಿನ್ನೆಲೆ ಐಪಿಸಿ ಸೆಕ್ಷನ್ 295 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


