ಬೆಂಗಳೂರು: ಪತಿ ಕಿರುಕುಳ ತಾಳಲಾಗದೆ ಸೀಮೆಯೆಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ
ಪತಿಯ ಕಿರುಕುಳವನ್ನು ಸಹಿಸಲಾಗದ ಪತ್ನಿ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಂಗಳೂರಿನ ಬಾಗಲಗುಂಟೆ ಪ್ರದೇಶದಲ್ಲಿ ನಡೆದಿದೆ,.

Published On :
ಬೆಂಗಳೂರು: ಪತಿಯ ಕಿರುಕುಳವನ್ನು ಸಹಿಸಲಾಗದ ಪತ್ನಿ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಂಗಳೂರಿನ ಬಾಗಲಗುಂಟೆ ಪ್ರದೇಶದಲ್ಲಿ ನಡೆದಿದೆ,.
ಮೃತಳನ್ನು ಗೀತಾ(34)ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಗಳು ಮನೆ ಎದುರು ಪ್ರತಿಭತನೆ ನಡೆಸಿದ್ದ ಕಾರಣ ಸ್ಥಳದಲ್ಲಿ ಕೆಲ ಸಮಯ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.
ಸೋಮವಾರ ಸಂಜೆ 6.30 ಕ್ಕೆ ಗೀತಾ ಮಲ್ಲಸಂದ್ರದಲ್ಲಿರುವ ತನ್ನ ಸಹೋದರನ ಮನೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಿರುಕುಳದ ಬಗ್ಗೆ ಆಕೆ ತನ್ನ ಸಂಬಂಧಿಕರಿಗೆ ವಿವರಿಸಿದ್ದಾಳೆ. ಬಳಿಕ ಬಚ್ಚಲು ಮನೆಯಲ್ಲಿ ಲಾಕ್ ಮಾಡಿಕೊಂಡು ಬೆಂಕಿ ಹಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಲೆ.ಘಟನೆ ಬಗೆಗೆ ಅರಿತ ನೆರೆಮನೆಯವರು ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಗೀತಾಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಕೆ ಅಷ್ಟರಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಗೀತಾ ಪತಿ ಭೀಮಣ್ಣ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ. ದಂಪತಿಗಳು ಬೀದರ್ ಮೂಲದವರಾಗಿದ್ದು ಕೆಲವು ವರ್ಷಗಳ ಹಿಂದೆ ನಗರಕ್ಕೆ ವಲಸೆ ಬಂದಿದ್ದರು. ಆದರೆ ಭೀಮಣ್ಣ ಕೆಲ ದಿನಗಳ ಹಿಂದಷ್ಟೇ ಬೆಂಗಳೂರನ್ನು ತೊರೆದು ಹೋಗಿದ್ದನು. ಇದೀಗ ಆತ್ಮಹತ್ಯೆ ಮಾಡಿಕೊಂಡ ಪತ್ನಿ ಗೀತಾ ಸಾವಿಗೆ ಭೀಮಣ್ಣನೇ ಪ್ರಚೋದನೆ ನೀಡಿದ್ದನೆಂದು ಶಂಕೆ ವ್ಯಕ್ತವಾಗಿದ್ದು ಆತನ ಪತ್ತೆಗೆ ತಂಡ ರಚನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


