ರಾಜ್ಯ

ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಡಿಯೋ ಶೇರ್ ಮಾಡಿದ 8 ಮಂದಿಯ ಬಂಧನ

ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪುತ್ತೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಡಿಯೋ ಶೇರ್ ಮಾಡಿದ 8 ಮಂದಿಯ ಬಂಧನ
ಸಂಗ್ರಹ ಚಿತ್ರ
Published On :
ಮಂಗಳೂರು: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪುತ್ತೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಧ್ಯಮಗಳು ವರದಿ ಮಾಡಿರುವಂತೆ, ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳಿಂದ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈ ವರೆಗೂ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮುರಳೀಧರ(29 ವರ್ಷ), ಚಂದ್ರಶೇಖರ ಮಯ್ಯ(47 ವರ್ಷ), ಶ್ರೇಯಾನ್ಸ್. ಎಸ್(20 ವರ್ಷ), ಪೂವಪ್ಪ. ಕೆ (26 ವರ್ಷ), ಪವನ್​ಕುಮಾರ್. ಡಿ(19 ವರ್ಷ), ಮೋಹಿತ್ ಪಿ.ಜಿ.(18 ವರ್ಷ), ಧ್ಯಾನ್ ಎ.ಎನ್(18 ವರ್ಷ), ಅದ್ವಿತ್​ಕುಮಾರ್ ನಾಯ್ಕ್(19 ವರ್ಷ) ಎಂದು ಗುರುತಿಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಪ್ರಮುಖ ಆರೋಪಿಗಳಾದ ಗುರುನಂದನ್, ಪ್ರಜ್ವಲ್, ಕಿಶನ್, ಸುನೀಲ್ ಹಾಗೂ ಪ್ರಖ್ಯಾತ್ ಎಂಬುವವರನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ನಿನ್ನೆ ಬಂಧನವಾಗಿದ್ದ ಐವರು ಮಂದಿ ಆರೋಪಿಗಳನ್ನು ಜುಲೈ 18ರ ತನಕ ನ್ಯಾಯಂಗ ಬಂಧನದಲ್ಲಿ ಇರಿಸುವಂತೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.