ರಾಜ್ಯ

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು

ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು
ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು
Published On :
ತುಮಕೂರು: ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಮೃತರು ಗುಬ್ಬಿ ತಾಲೂಕಿನ ಮತ್ತಿಘಟ್ಟಿ ನಿವಾಸಿಗಳಾಗಿದ್ದು, ಅವರ ಹೆಸರು ಇನ್ನೂ ತಿಳಿದುಬಂದಿಲ್ಲ. ಗಾಯಗೊಂಡ ಇಬ್ಬರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಲ್ಲಸಂದ್ರದ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಡಿಕ್ಕಿಯ ರಸಭಕ್ಕೆ ನಜ್ಜುಗುಜ್ಜಾಗಿದ್ದ ಆಟೋದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಸ್ಥಳೀಯರು ಮತ್ತು ಪೊಲೀಸರು ಹೊರತೆಗೆಯಲು ಹರಸಾಹಸಪಟ್ಟರು.
ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.