ರಾಜ್ಯ

ಜೆಡಿಎಸ್​ ಮುಖಂಡ, ಮಾಜಿ ಶಾಸಕ ಕೆ.ಎಲ್​. ಶಿವಲಿಂಗೇಗೌಡ ನಿಧನ

ಜೆಡಿಎಸ್​ ಹಿರಿಯ ಮುಖಂಡ ಹಾಗೂ ಸಾತನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಲ್.ಶಿವಲಿಂಗೇಗೌಡ(93) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಜೆಡಿಎಸ್​ ಮುಖಂಡ, ಮಾಜಿ ಶಾಸಕ  ಕೆ.ಎಲ್​. ಶಿವಲಿಂಗೇಗೌಡ ನಿಧನ
ಕೆಎಲ್ ಶಿವಲಿಂಗೇಗೌಡ
Published On :
ಬೆಂಗಳೂರು: ಜೆಡಿಎಸ್​ ಹಿರಿಯ ಮುಖಂಡ ಹಾಗೂ ಸಾತನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಲ್.ಶಿವಲಿಂಗೇಗೌಡ(93) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಲಿಂಗೇಗೌಡ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಸಾತನೂರಿನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಿವಲಿಂಗೇಗೌಡ ಅವರಿಗೆ ಇಬ್ಬರು ಮಕ್ಕಳಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿ ಇರುವ ಮನೆಗೆ ಮೃತದೇಹವನ್ನು ಕೊಂಡೊಯ್ಯಲಾಗಿದೆ. ಭಾನುವಾರ ಬೆಳಗ್ಗೆ ಕನಕಪುರದ ಆರ್​ಇಎಸ್​ನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ಸ್ವಗ್ರಾಮವಾದ ಕಾಡಳ್ಳಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.