ರಾಜ್ಯ

ಐಎಂಎ ವಂಚನೆ ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಬಂಧನ

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್‌ಐಟಿ) ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಸೋಮವಾರ ಬಂಧಿಸಿದೆ.

ಐಎಂಎ ವಂಚನೆ ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಬಂಧನ
ವಿಜಯ್ ಶಂಕರ್
Published On :
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್‌ಐಟಿ) ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಸೋಮವಾರ ಬಂಧಿಸಿದೆ.
ಗ್ರಾಮ ಲೆಕ್ಕಿಗ ಮಂಜುನಾಥ್ ಅವರ ಐಎಂಎ ಸಂಸ್ಥಾಪಕ ಮನ್ಸೂರ್ ಅಲಿ ಖಾನ್ ಅವರಿಂದ 4.5 ಕೋಟಿ ರುಪಾಯಿ ಲಂಚ ಪಡೆದ ಆರೋಪದ ಮೇಲೆ ವಿಜಯ್ ಶಂಕರ್ ಅವರನ್ನು ಎಸ್ ಐಟಿ ಇಂದು ಬಂಧಿಸಿದೆ.
ಕಳೆದ ವಾರ ಉಪವಿಭಾಗಾಧಿಕಾರಿ ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ಈ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಆಧಾರದ ಮೇಲೆ ಈಗ ಜಿಲ್ಲಾಧಿಕಾರಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ‌. ಅಲ್ಲದೆ ಬಿಲ್ಡರ್ ಕೃಷ್ಣಮೂರ್ತಿ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಚಾರಣೆ ಸಂಬಂಧ ವಿಜಯ್ ಶಂಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಗಿದ ಬಳಿಕವೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಎಸ್‌ಐಟಿ ವಶದಲ್ಲಿದ್ದು, ಅವರ ವಿಚಾರಣೆ ಬೆನ್ನಲ್ಲೇ ಜಿಲ್ಲಾಧಿಕಾರಿಯೊಬ್ಬರನ್ನು ವಿಚಾರಣೆಗೆ ಒಳಪಡಿಸುತ್ತಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವಿಜಯ್ ಶಂಕರ್ ಅವರಿಗೆ ನೋಟೀಸ್ ನೀಡಲಾಗಿತ್ತು. ಹೀಗಾಗಿ ಅವರು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಐಟಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.