ರಾಜೀನಾಮೆ ಬೆನ್ನಲ್ಲೇ ಬೇಗ್ ಗೆ ಸಂಕಷ್ಟ: ಐಎಂಎ ವಿಚಾರಣೆಗೆ ಹಾಜರಾಗಲು ಎಸ್‍ಐಟಿ ನೋಟಿಸ್
ಶಿವಾಜಿನಗರ ಶಾಸಕ ರೊಷನ್ ಬೇಗ್ ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಈ ರಾಜೀನಾಮೆ ಬೆನ್ನಲ್ಲೇ ಅವರಿಗೆ ಇನ್ನೊಂದು ಸಂಕಷ್ತ ಎದುರಾಗಿದೆ.

Published On :
ಬೆಂಗಳೂರು: ಶಿವಾಜಿನಗರ ಶಾಸಕ ರೊಷನ್ ಬೇಗ್ ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಈ ರಾಜೀನಾಮೆ ಬೆನ್ನಲ್ಲೇ ಅವರಿಗೆ ಇನ್ನೊಂದು ಸಂಕಷ್ತ ಎದುರಾಗಿದೆ.
ಐಎಂಎ ವಂಚನೆ ಪ್ರಕರಣದಲ್ಲಿ ಭಾಗಿ ಎನ್ನಲಾಗಿರುವ ರೋಷನ್ ಬೇಗ್ ಗುರುವಾರ ವಿಚಾರಣೆಗೆ ಹಾಜರಾಗಬೇಕೆಂದು ಎಸ್‍ಐಟಿ ನೋಟಿಸ್ ನೀಡಿದೆ.
ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿ ಹಲವರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸುದ್ದಿಯಾಗಿದ್ದ ರೋಷನ್ ಬೇಗ್ ಅವರನ್ನು ಕೈ ಪಕ್ಷ ಉಚ್ಚಾಟನೆ ಮಾಡಿತ್ತು. ಆದರೆ ಇಂದು ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರೊಷನ್ ಬೇಗ್ ರಾಜೀನಾಮೆ ನಿಡಿದ ಬೆನ್ನಲ್ಲೇ ಎಸ್‍ಐಟಿ ನೋಟಿಸ್ ಬಂದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸರ್ಕಾರದ ವಿರುದ್ಧ ತಿರುಗಿ ಬಿದ್ದ ರೋಷನ್ ಬೇಗ್ ಮೇಲೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಐಎಂಎ ಅಸ್ತ್ರ ಪ್ರಯೋಗಿಸುತ್ತಿದೆಯೆ ಎಂಬ ಅನುಮಾನ ಮೂಡಿದೆ.
ಇನ್ನು ಕೆಲವು ದಿನಗಳ ಹಿಂದೆ ಚಿವ ಜಮೀರ್ ಅಹ್ಮದ್ ಸಹ ಎಸ್‍ಐಟಿ ವಿಚಾರಣೆಗೆ ಹಾಜರಾಗಿ ಸಾವಿರಾರು ಕೋಟಿ ರು. ವಂಚನೆಯ ಐಎಂಎ ಪ್ರಕರಣದ ತನಿಖೆಗೆ ಸಹಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


