ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಧರ್ಮಸ್ಥಳದಿಂದ ವಾಪಾಸಗುತ್ತಿದ್ದ ಮೂವರ ದುರ್ಮರಣ
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಗಳ್ಳಿ ...

Published On :
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಗಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ.
ಮೃತರ ಹೆಸರು, ಪರಿಚಯ ತಿಳಿದುಬಂದಿಲ್ಲ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮುಡಿ ಕೊಟ್ಟು ವಾಪಸ್ಸಾಗುತ್ತಿದ್ದರು.ಧರ್ಮಸ್ಥಳದಿಂದ ಬಳ್ಳಾರಿಗೆ ವಾಪಸ್ಸಾಗುವ ವೇಳೆಯಲ್ಲಿ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿಕಾರು ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


