ಐಎಂಎ ವಂಚನೆ ಪ್ರಕರಣ: ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಹಣ ಪಡೆದಿದ್ದ ಮೌಲ್ವಿ ಬಂಧನ!
ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ.

Published On :
ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಮನ್ಸೂರ್ ಅಲಿಖಾನ್ ರಿಂದ ಹಣ ಪಡೆದಿದ್ದ ಆರೋಪದ ಮೇರೆಗೆ ಮುಸ್ಲಿಮ್ ಧರ್ಮ ಗುರುವೊಬ್ಬರನ್ನು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಶಿವಾಜಿನಗರದ ಓಪಿಎಚ್ ರಸ್ತೆಯಲ್ಲಿ ಬೇಪಾರಿಯನ್ ಮಸೀದಿ ಧರ್ಮಗುರು ಹನೀಫ್ ಅಫ್ಸರ್ ಅಜೀಜ್ ರನ್ನು ಅಧಿಕಾರಿಗಳು ಬಂಧಿಸಿದ್ದು, ಹೂಡಿಕೆದಾರರ ಮೇಲೆ ಪ್ರಭಾವ ಬೀರಲು ಈತ ಬರೊಬ್ಬರಿ 3 ಕೋಟಿ ಮೌಲ್ಯದ ಮನೆ ಉಡುಗೊರೆ ಪಡೆದಿದ್ದ ಎನ್ನಲಾಗಿದೆ. ಅಂತೆಯೇ ಐಎಂಎ ಸಂಸ್ಥೆ ನಿರ್ದೇಶಕರ ವಿಚಾರಣೆ ವೇಳೆ ಧರ್ಮಗುರುವಿಗೆ 2017ರಲ್ಲಿ ಎಚ್ಎಸ್ಆರ್ ಲೇಔಟ್ ನಲ್ಲಿ ಮೂರು ಕೋಟಿ ಮೌಲ್ಯದ ಐಶಾರಾಮಿ ಮನೆಯನ್ನು ಉಡುಗೊರೆಯಾಗಿ ನೀಡಿದ್ದ ವಿಚಾರ ಕೂಡ ಇದೀಗ ಬಯಲಾಗಿದೆ.
ವಿಚಾರಣೆ ವೇಳೆ ಈ ಮಾಹಿತಿಯನ್ನು ಸಂಗ್ರಹಿಸಿದ ಅಧಿಕಾರಿಗಳು ಮೌಲ್ವಿ ಅವರನ್ನು ನಿನ್ನೆ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ಬಳಿಕ ಸಂಜೆ ವೇಳೆಗೆ ಬಂಧನ ಪ್ರಕ್ರಿಯೆಯನ್ನು ಅಧಿಕೃತಗೊಳಿಸಿದ್ದಾರೆ.
ಈ ಧರ್ಮ ಗುರು ಮಾತು ಕೇಳಿ ಸಾವಿರಾರು ಮಂದಿ ಅಮಾಯಕರು ಐಎಂಎನಲ್ಲಿ ಹೂಡಿಕೆ ಮಾಡಿದ್ದರು. ಜನ ಸಮಾನ್ಯರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಐಎಂಎ ಸಂಸ್ಥೆಯಲ್ಲಿ ಸಹಕರಿಸಿದ ಆರೋಪದ ಮೇರೆಗೆ ಹನೀಫ್ ಅವರನ್ನು ಬಂಧಿಸಲಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
ಈ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ಕೂಡ ಈ ಹಿಂದೆ ಬಿಡುಗಡೆಗೊಳಿಸಿದ್ದ ಆಡಿಯೋ ಮತ್ತು ವಿಡಿಯೋ ಹೇಳಿಕೆಗಳಲ್ಲಿ ತನ್ನಿಂದ ಧಾರ್ಮಿಕ ಗುರುಗಳು ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದ. ಈ ಸಂಬಂಧವೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಎಸ್ಐಟಿ ತನಿಖೆkarnataka policeಕರ್ನಾಟಕ ಪೊಲೀಸ್IMA fraud caseಐಎಂಎ ವಂಚನೆ ಪ್ರಕರಣSIT Investigation
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


