ಬೆಂಗಳೂರು: ಸಾಲ ತೀರಿಸಲಾಗದೆ ನೊಂದು ವ್ಯಕ್ತಿ ಆತ್ಮಹತ್ಯೆ
ಸಾಲ ಹಿಂತಿರುಗಿಸಲಾಗದೆ ಬೇಸತ್ತು 34 ವರ್ಷದ ಯುವಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ...

Published On :
ಬೆಂಗಳೂರು: ಸಾಲ ಹಿಂತಿರುಗಿಸಲಾಗದೆ ಬೇಸತ್ತು 34 ವರ್ಷದ ಯುವಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರದೀಪ್ ಬಿ ಎಂದು ಗುರುತಿಸಲಾಗಿದ್ದು ಖಾಸಗಿ ಬ್ಯಾಂಕ್ ನಲ್ಲಿ ಸಾಲ ಮರುಪಡೆಯುವಿಕೆ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ ಪ್ರದೀಪ್ ತಂದೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ಬೆಡ್ ರೂಂನಲ್ಲಿ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಯಿತು. ಕೂಡಲೇ ಮಾದನಾಯಕನಹಳ್ಳಿ ಪೊಲೀಸರಿಗೆ ವಿಷಯ ತಿಳಿಸಿದರು.
ಪ್ರಾಥಮಿಕ ತನಿಖೆ ವೇಳೆ, ಪ್ರದೀಪ್ 2 ವರ್ಷಗಳ ಹಿಂದೆ ಬ್ಯಾಂಕಿನಿಂದ 1 ಲಕ್ಷ ರೂಪಾಯಿ ಸಾಲ ಪಡೆದು ಅದನ್ನು ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ. ಅದರಿಂದ ನೊಂದು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿ ತವರು ಮನೆಗೆ ಕಾರ್ಯಕ್ರಮಕ್ಕೆಂದು ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರದೀಪ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


